
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿಡಿಲು ಬಡಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ತಡ ರಾತ್ರಿ ನಡೆದಿದೆ.
ನಿನ್ನೆ ಸಾಯಂಕಾಲ ಗುಡುಗು ಮಿಂಚು ಸಹಿತ ಮಳೆ ಆಗಿದೆ. ದನಗಳನ್ನು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ವ್ಯಕ್ತಿಗೆ ಸಿಡಿಲು ಬಡಿದಿದೆ. ಸಿಡಿಲು ಬಡಿತದಿಂದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಭೀಮಪ್ಪ ಬಾಳಪ್ಪ ಮಂಗಳೂರು (56) ಮೃತ ದುರ್ದೈವಿಯಾಗಿದ್ದಾನೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ