
ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್ ಬಂಕ್ ನಲ್ಲಿಯೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿಯಲ್ಲಿ ನಡೆದಿದೆ.
ಯಶವಂತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಚಿಕ್ಕಬಳ್ಳಾಪುರ ನಗರದ ಬಾಪೂಜಿನಗರ ನಿವಾಸಿ.
ಪೆಟ್ರೋಲ್ ಬಂಕ್ ಮಾಲೀಕ ವರುಣ್ ಕರೆ ಮಾಡಿದರೂ ಯಶವಂತ್ ಫೋನ್ ರಿಸೀವ್ ಮಾಡಿರಲಿಲ್ಲ. ಇದರಿಂದ ಮಾಲೀಕ ಪೆಟ್ರೋಲ್ ಬಂಕ್ ಗೆ ಬಂದು ನೋಡಿದ್ದಾರೆ. ಈ ವೇಳೆ ಯುವಕ ಪೆಟ್ರೋಲ್ ಬಂಕ್ ಕಚೇರಿಯಲ್ಲಿಯೇ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.
ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.