Latest

ಪೆಟ್ರೋಲ್ ದರ ಮತ್ತೆ ಏರಿಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಲೀಟರ್ ಪೆರೋಲ್ ಬೆಲೆ ಮೇಲೆ 25 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 24 ಪೈಸೆ ಹೆಚ್ಚಳ ಮಾಡಲಾಗಿದೆ.

ಮೇ 4ರಿಂದ ಈವರೆಗೆ 24 ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ದೇಶದ ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿದೆ.

Related Articles

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 102.30 ರೂ ಡೀಸೆಲ್ ದರ ಲೀಟರ್ ಗೆ 94.39 ರೂಪಾಯಿಯಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ 96.12 ರೂಪಾಯಿ ಹಾಗೂ ಡೀಸೆಲ್ ದರ ಲೀಟರ್ ಗೆ 86.98ರೂಪಾಯಿಯಾಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಲೀಟರ್ ಗೆ 96.6ರೂ ಹಾಗ್ ಡೀಸೆಲ್ 94.39ರೂಪಾಯಿಯಾಗಿದೆ.

ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಲೀಟರ್ ಗೆ 99.33ರೂಪಾಯಿ ಹಾಗೂ ಡೀಸೆಲ್ ದರ ಲೀಟರ್ ಗೆ 92.21 ರೂಪಾಯಿಯಾಗಿದೆ. ಕೊಪ್ಪಳ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್ ದರ 100ರೂ ಆಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button