ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಳೆದ ನಾಲ್ಕು ದಿನಗಳಿಂದ ದೇಶದಲ್ಲಿ ಪೆಟ್ರೋಲ್-ಡೀಸೆಲ್ ದರ ಸತತವಾಗಿ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ 15 ಪೈಸೆಯಂತೆ ಹೆಚ್ಚಳವಾಗಿದೆ.
ಅಂತರಾಷ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಡೀಸೆಲ್-ಪೆಟ್ರೋಲ್ ದರ ಏರಿಕೆಯಾಗುತ್ತಿದೆ ಎನ್ನಲಾಗಿದೆ.
ಡೀಸೆಲ್ ದರ ಪ್ರತಿ ಲೀಅರ್ ಗೆ 23 ಪೈಸೆ ಹೆಚ್ಚಳವಾಗಿದೆ. ಕೊರೊನಾ ಸಂಕಷ್ಟದಿಂದ ಚೇತರಿಸಿಕೊಳ್ಳುತ್ತಿರುವ ಬೆನ್ನಲ್ಲೇ ತೈಲ ದರದಲ್ಲಿ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ