Latest

21 ದಿನಗಳಿಂದ ನಿರಂತರ ಏರುತ್ತಿದೆ ಪೆಟ್ರೋಲ್-ಡೀಸೆಲ್ ದರ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಒಂದೆಡೆ ಕೊರೊನಾ ಅಟ್ಟಹಾಸದಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು, ಜನರು ಪರದಾಡುತ್ತಿದ್ದಾರೆ. ಈ ನಡುವೆ ಕಳೆದ 21 ದಿನಗಳಿಂದ ಅಂದರೆ ಜೂನ್ 7ರಿಂದ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 80.38 ಮತ್ತು ಡೀಸೆಲ್ ದರ 80.40ಕ್ಕೆ ತಲುಪಿದೆ. ದೇಶದಲ್ಲಿ ಲಾಕ್‌ಡೌನ್ ಜಾರಿಯಾಗುವ ಮೊದಲು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಕ್ರಮವಾಗಿ 69.60 ರೂ, 62.30 ರೂ.ಇತ್ತು. ಕೊವಿಡ್ 19 ಭೀತಿಯಿಂದಾಗಿ ಜಾರಿಯಲ್ಲಿದ್ದ ಲಾಕ್‌ಡೌನ್ ಸಡಿಲಗೊಂಡ ಬಳಿಕ ಜೂನ್ 7 ರಿಂದ ಇಂಧನ ದರ ಪರಿಷ್ಕರಣೆ ಆರಂಭಿಸಲಾಗಿದೆ. ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 25 ಪೈಸೆ ಮತ್ತು 21 ಪೈಸೆಯಷ್ಟು ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಪ್ರತಿ ಲೀ. ಪೆಟ್ರೋಲ್ 82.74 ರೂ, ಡೀಸೆಲ್ ಪ್ರತಿ ಲೀಟರ್ 76.25 ರೂ ಗೆ ಹೆಚ್ಚಳವಾಗಿದೆ.

ಲಾಕ್‌ಡೌನ್‌ ನಿಂದ ನಷ್ಟ ಅನುಭವಿಸಿದ್ದ ಸಾರಿಗೆ ಇಲಾಖೆ ಇದೀಗ ಡೀಸೆಲ್ ಬೆಲೆ ಏರಿಕೆಯಿಂದಾಗಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಇದರಿಂದಾಗಿ ಸರಕು ಸಾಗಾಣಿಕೆ ವೆಚ್ಚ ಹೆಚ್ಚಳವಾದರೆ ಆಹಾರ ಪದಾರ್ಥಗಳ ಬೆಲೆಯೂ ದುಬಾರಿಯಾಗಲಿದೆ.

Home add -Advt

Related Articles

Back to top button