Latest

ಸತತ 5ನೇ ದಿನವೂ ಏರಿಕೆಯಾದ ಪೆಟ್ರೋಲ್-ಡೀಸೆಲ್ ದರ

ಪ್ರಗತಿವಾಹಿನಿ ಸುದ್ದಿ; ನವದೆಹಲಿ; ದೇಶದಲ್ಲಿ ಪೆಟ್ರೋಲ್-ಡೀಸೆಲ್ ದರ ಕಳೆದ ನಾಲ್ಕು ದಿನಗಳಿಂದ ಏರಿಕೆಯಾಗುತ್ತಿದ್ದು, ಇಂದು ಕೂಡ ಬೆಲೆ ಏರಿಕೆ ಮುಂದುವರೆದಿದೆ.

ಇಂದು ಪೆಟ್ರೋಲ್ ದರ ಲೀಟರ್ ಗೆ 50 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 55 ಪೈಸೆಯಂತೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ಲಿಟರ್ ಪೆಟ್ರೋಲ್ ದರ 99.11 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.42 ರೂಪಾಯಿ ಆಗಿದೆ.

ಮುಂಬೈ ನಲ್ಲಿ ಲಿಟರ್ ಪೆಟ್ರೋಲ್ ದರ 113.88 ಪೈಸೆ ಹಾಗೂ ಡೀಸೆಲ್ 98.13 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.44 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.67 ರೂಪಾಯಿ ದಾಖಲಾಗಿದೆ.

ಮೈಸೂರಿನಲ್ಲಿ ಪೆಟ್ರೋಲ್ ದರ 103.98 ರೂಪಾಯಿ, ಡೀಸೆಲ್ ದರ 88.24 ರೂಪಾಯಿ ಆಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 105.00 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.10 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 112.37 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.69 ರೂಪಾಯಿ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button