ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೆ ನಿರಂತರ ಏರಿಕೆಯಾಗುತ್ತಿದ್ದು, ಇಂದು ಕೂಡ ಪೆಟ್ರೋಲ್, ಡೀಸೆಲ್ ದರ ಲೀಟರ್ ಗೆ 80 ಪೈಸೆ ಹೆಚ್ಚಳವಾಗಿದೆ.
ಕಳೆದ 12 ದಿನಗಳಿಂದ ಇಂಧನ ಬೆಲೆಯಲ್ಲಿ ಪ್ರತಿ ಲೀಟರ್ ಗೆ ಸುಮಾರು 7.20 ರೂಪಾಯಿ ಹೆಚ್ಚಳವಾಗಿದೆ. ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಈ ಮೂಲಕ ಲೀಟರ್ ಪೆಟ್ರೋಲ್ 102.61 ರೂ.ತಲುಪಿದೆ. ಲೀಟರ್ ಡೀಸೆಲ್ ಬೆಲೆ 93.87 ತಲುಪಿದೆ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ 117.57 ರೂ ಹಾಗೂ ಡೀಸೆಲ್ 101.79 ರೂ ಆಗಿದೆ. ಚೆನ್ನೈನಲ್ಲಿ ಪೆಟ್ರೋಲ್ 107.4, ಡೀಸೆಲ್ 97.52, ಕೊಲ್ಕತ್ತಾದಲ್ಲಿ ಪೆಟ್ರೋಲ್ 111.3, ಡೀಸೆಲ್ 96.22 ರೂ ತಲುಪಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದು ಭಾರತದ ತೈಲ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಲು ಕಾರಣವಾಗಿದೆ.
ಹಬ್ಬದ ಸಂಭ್ರಮದಲ್ಲೇ ಮತ್ತೆ ಏರಿಕೆಯಾಯ್ತು ಚಿನ್ನಾಭರಣಗಳ ದರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ