Latest

LPG ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರದಲ್ಲಿಯೂ ಏರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜನಸಾಮಾನ್ಯರಿಗೆ ಶಾಕ್ ಮೇಲೆ ಶಾಕ್. ಎಲ್ ಪಿಜಿ ಸಿಲಿಂಡರ್ ದರ ಏರಿಕೆ ಬೆನ್ನಲ್ಲೇ ಇದೀಗ ಪೆಟ್ರೋಲ್, ಡೀಸೆಲ್ ದರದಲ್ಲಿಯೂ ಏರಿಕೆ ಮಾಡಲಾಗಿದ್ದು, ಗ್ರಾಹಕರಿಗೆ ತೈಲ ಬೆಲೆ ಏರಿಕೆ ಬಿಸಿ ತಟ್ಟಿದೆ.

ಪೆಟ್ರೋಲ್, ಡೀಸೆಲ್ ದರ ಲೀಟರ್ ಗೆ 80 ಪೈಸೆ ಹೆಚ್ಚಳ ಮಾಡಲಾಗಿದೆ. ನಾಲ್ಕುವರೆ ತಿಂಗಳ ಬಳಿಕ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಲೀಟರ್​ಗೆ 96.21 ರೂಪಾಯಿ, ಡೀಸೆಲ್ ಲೀಟರ್​ಗೆ 87.47 ರೂಪಾಯಿ ಆಗಿದ್ದರೆ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.42 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.80 ರೂಪಾಯಿ ದಾಖಲಾಗಿದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.82 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.00 ರೂಪಾಯಿ ಆಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.19 ರೂಪಾಯಿ , ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.51 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್​ಗೆ 90.62 ರೂಪಾಯಿ ಆಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 109.10 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.50 ರೂಪಾಯಿ ನಿಗದಿಯಾಗಿದೆ.

ಎಲ್ ಪಿಜಿ ಸಿಲಿಂಡರ್ ದರ ಏರಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button