Latest

ಪೆಟ್ರೋಲ್-ಡೀಸೆಲ್ ದರ ಇಂದು ಎಷ್ಟಿದೆ?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತದ ತೈಲ ಕಂಪನಿಗಳು ಇಂದು ಬೆಳಿಗ್ಗೆ ಪೆಟ್ರೋಲ್-ಡೀಸೆಲ್ ದರ ಬಿಡುಗಡೆ ಮಾಡಿದ್ದು, ಉಕ್ರೇನ್-ರಷ್ಯಾ ನಡುವಿನ ಯುದ್ಧ ದೇಶದ ತೈಲ ಬೆಲೆಗಳ ಮೇಲೆ ಪರಿಣಾಮ ಬೀರಿದೆಯೇ? ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ.

ಇಂಧನ ದರದಲ್ಲಿ ಯಾವುದೇ ಹೆಚ್ಚಳ ಕಂಡುಬಂದಿಲ್ಲ. ಮಹಾನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ದರ ಇಲ್ಲಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ ಗೆ 100.58 ರೂಪಾಯಿ ಇದೆ. ಡೀಸೆಲ್ ದರ 85.1 ರೂಪಾಯಿ ಇದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button