National

*ದೇಶದ ಜನತೆಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಅದರಲ್ಲಿಯೂ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಪೆಟ್ರೋಲ್, ಡೀಸೆಲ್ ದರ ಭಾರಿ ಏರಿಕೆಯಾಗಲಿದೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿತ್ತು. ಇದರ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button