Kannada NewsLatestNational

*ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ.

ಅಬಕಾರಿ ಸುಂಕ ಕಡಿತದಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಮತ್ತು ಅದರ ಪರಿಣಾಮವಾಗಿ ಟೆಹ್ರಾನ್ ಹಾರ್ಮುಜ್ ಜಲಸಂಧಿಯ ಮೇಲೆ ಹೇರಿದ ದಿಗ್ಬಂಧನದಿಂದ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನಿಂದಾಗಿ ಬೆಲೆ ಏರಿಕೆಯಾಗುವ ಭೀತಿಯ ನಡುವೆಯೇ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಮಾಡಲಾಗಿದೆ.

ಪೆಟ್ರೋಲ್ ಲೀಟರ್‌ಗೆ ಅಬಕಾರಿ ಸುಂಕ 13 ರೂ.ನಿಂದ 3 ರೂ.ಗೆ ಇಳಿಸಲಾಗಿದೆ. ಡೀಸೆಲ್ ಮೇಲಿನ ಸುಂಕ 10 ರೂ.ನಿಂದ ಶೂನ್ಯಕ್ಕೆ ಇಳಿಕೆಯಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನತೆ ಮತ್ತು ಅಮೆರಿಕ-ಇರಾನ್ ಯುದ್ಧದ ಬೆದರಿಕೆಯಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆಗಳು ಬ್ಯಾರೆಲ್‌ಗೆ 114 ಡಾಲರ್​ಗಿಂತ ಹೆಚ್ಚಿದ್ದವು.

ಪ್ರಸ್ತುತ, ಪೆಟ್ರೋಲ್ ಮೇಲೆ ಲೀಟರ್‌ಗೆ 13 ರೂ. ಮತ್ತು ಡೀಸೆಲ್ ಮೇಲೆ ಲೀಟರ್‌ಗೆ 10 ರೂ. ಅಬಕಾರಿ ಸುಂಕವಿತ್ತು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button