
ಶಿಲ್ಕ ಪಾವತಿ ಅವಧಿ ವಿಸ್ತರಣೆ
ಪ್ರಗತಿವಾಹಿನಿ ಸುದ್ದಿ: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ದಿನಂಕ ವಿಸ್ತರಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಈ ಬಗ್ಗೆವ್ ಮಾಹಿತಿ ನೀಡಿದ್ದಾರೆ. ಶುಲ್ಕ ಪಾವತಿ ದಿನಾಂಕ ಅಕ್ಟೋಬರ್.7ರವರೆಗೆ ದಿನಾಂಕ ವಿಸ್ತರಿಸರಿಸಲಾಗಿದೆ.
ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್‍ಲೋಡ್ ಮಾಡಿಕೊಂಡು ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎಂಬಿಎ / ಎಂಸಿಎ / ಎಂಇ / ಎಂಟೆಕ್ / ಎಂ.ಆರ್ಕಿಟೆಕ್ಟರ್ ಕೋರ್ಸುಗಳ ಪ್ರವೇಶಾತಿಗೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ದಿನಾಂಕ 25/09/2026 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ. ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಿ (ಚಲನ್ ಡೌನ್ ಲೋಡ್ ಮಾಡಿಕೊಂಡು) ಆಯಾ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ವೇಳಾಪಟ್ಟಿಯನ್ನು ಪರಿಷ್ಕರಿಸಿ ಈ ಕೆಳಗೆ ನೀಡಲಾಗಿದೆ.
ಸೀಟು ಹಂಚಿಕೆಯಾಗಿ ಇಲ್ಲಿಯವರೆಗೆ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಿ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಸೂಚಿಸಿದೆ.
ಪಿಜಿ ಪ್ರವೇಶ ನಿಯಮಾವಳಿಗಳಲ್ಲಿ ನೀಡಿರುವ ಶೈಕ್ಷಣಿಕ ವಿದ್ಯಾರ್ಹತೆಗಳು ಹಾಗೂ ಇತರೆ ಮಾನದಂಡಗಳು ಎಂಬಿಎ, ಎಂಸಿಎ, ಎಂಇ / ಎಂ.ಟೆಕ್ / ಎಂ.ಆರ್ಕಿಟೆಕ್ಟರ್ ಕೋರ್ಸುಗಳ ಪ್ರವೇಶಕ್ಕೆ ಅನ್ವಯಿಸುತ್ತದೆ. SC/ST/CATEGORY-I ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ‘ಮಾನದಂಡಗಳು ಕರ್ನಾಟಕದ SC/ST/CATEGORY-I
- ಕೌನ್ಸಿಲಿಂಗ್ ನಡೆಸಲು ವೇಳಾಪಟ್ಟಿಯಲ್ಲಿನ ಲಭ್ಯವಿರುವ ಸೀಮಿತ ಸಮಯವನ್ನು ಗಮನದಲ್ಲಿಟ್ಟುಕೊಂಡು, ಭಾಗವಹಿಸುತ್ತಿರುವ ಎಲ್ಲಾ ಸಂಸ್ಥೆಗಳು / ಕಾಲೇಜುಗಳು ಎಲ್ಲಾ ಶನಿವಾರ ಮತ್ತು ಭಾನುವಾರಗಳು ಮತ್ತು ಸಾರ್ವತ್ರಿಕ ರಜಾ ದಿನಗಳನ್ನು ಕೆಲಸದ ದಿನಗಳೆಂದು ಪರಿಗಣಿಸಲು ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



