
ಪ್ರಗತಿವಾಹಿನಿ ಸುದ್ದಿ: ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಫಾರ್ಮಾ ಕಂಪನಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಸ್ಫೋಟಕ್ಕೆ ಮೃತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. 40ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಅನಕಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯ ಘಟಕದಲ್ಲಿ ಸ್ಫೋಟ ಸಂಭವಿಸಿತ್ತು.
ಈ ವೇಳೆ 380 ನೌಕರರು ಫಾರ್ಮಾ ಕಂಪನಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ನಿನ್ನೆ ಮಧ್ಯಾಹ್ನ ಊಟದ ವೇಳೆ ಈ ಅವಘಡ ಸಂಭವಿಸಿದ್ದು, ಸ್ಫೋಟಕ್ಕೆ ಸೂಕ್ತ ಕಾರಣ ಇನ್ನು ತಿಳಿದುಬಂದಿಲ್ಲ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ