Belagavi NewsBelgaum NewsKannada NewsKarnataka NewsLatest
ನವಿಲುತೀರ್ಥ ಜಲಾಶಯದಲ್ಲಿ ಮುಳುಗಿ ಯಾತ್ರಾರ್ಥಿ ಸಾವು

ಪ್ರಗತಿವಾಹಿನಿ ಸುದ್ದಿ, ಸವದತ್ತಿ: ಇಲ್ಲಿನ ನವಿಲುತೀರ್ಥ ಜಲಾಶಯದಲ್ಲಿ ಆಕಸ್ಮಿಕವಾಗಿ ಮುಳುಗಿ ಯಾತ್ರಾರ್ಥಿಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.
ವಿಜಯಪುರ ಜಿಲ್ಲೆಯ ವೀರಭದ್ರಪ್ಪ ಯಮನಪ್ಪ ಯರಗಲ್ (21) ಮೃತಪಟ್ಟವರು. ಸವದತ್ತಿ ದರ್ಶನಕ್ಕೆಂದು ಆಗಮಿಸಿದ್ದ ಸಂದರ್ಭದಲ್ಲಿ ನವಿಲುತೀರ್ಥದಲ್ಲಿ ಆಕಸ್ಮಿಕವಾಗಿ ಬಿದ್ದು ಈ ಅವಘಡ ಸಂಭವಿಸಿದೆ.
ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದು ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ