Karnataka NewsLatestPolitics

*ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯಪಾಲರು ತನ್ನ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ರದ್ದುಗೊಳಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Home add -Advt

ಮುಡಾದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ರದ್ದು ಮಾಡವಂತೆ ರಿಟ್ ಅರ್ಜಿ ಮೂಲಕ ಸಿಎಂ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ಇನ್ನೊಂದೆಡೆ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಕೂಡ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


Related Articles

Back to top button