Kannada NewsLatestNational

*ವಿಮಾನ ದುರಂತ: ಹಾಸ್ಟೆಲ್ ವಿದ್ಯಾರ್ಥಿಗಳ ಸಾವಿನ ಸಂಖ್ಯೆ ಎಷ್ಟು?*

ಪ್ರಗತಿವಾಹಿನಿ ಸುದ್ದಿ : ಗುಜರಾತ್‌ನ ಅಹಮದಾಬಾದ್‌ ನಲ್ಲಿ ನಡೆದ ವಿಮಾನ ದುರಂತದಲ್ಲಿ, ವಿಮಾನ ಸಿಬ್ಬಂದಿ ಸೇರಿದಂತೆ 241 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಆದ್ರೆ ವಿಮಾನ ಮೇಡಿಕಲ್ ಹಾಸ್ಟೆಲ್ ಮೇಲೆ ಬಿದ್ದಿತ್ತು. ಹಾಸ್ಟೆಲ್ ನಲ್ಲಿ ಇದ್ದ ಹಲವಾರು ವಿದ್ಯಾರ್ಥಿಗಳು ದುರ್ಮರಣ ಹೊಂದಿದ್ದಾರೆ.  

ವಿಮಾನ ಹಾಸ್ಟೆಲ್ ನ ಮೇಲ್ಬಾಗಕ್ಕೆ ಅಪ್ಪಳಿಸಿದ ಪರಿಣಾಮ ಹಾಸ್ಟೆಲ್ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಮಾನ ಹಾಸ್ಟೆಲ್‌ಗೆ ನುಗ್ಗುತ್ತಿದ್ದಂತೆ ಕೆಲ ವಿದ್ಯಾರ್ಥಿಗಳು ಕಟ್ಟಡದಿಂದ ಜಿಗಿದು ಗಂಭೀರ ಗಾಯಗೊಂಡಿದ್ದಾರೆ. ಇನ್ನು ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.

ಹಾಸ್ಟೆಲ್ ನಲ್ಲಿ ಮಧ್ಯಾಹ್ನ ಊಟಕ್ಕೆ ಬಂದಿದ್ದ 24 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇನ್ನು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯೆ ಇದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button