ಪ್ರಗತಿವಾಹಿನಿ ಸುದ್ದಿ: ಲ್ಯಾಂಡಿಂಗ್ ವೇಳೆ ವಿಮಾನ ರನ್ ವೇಯಿಂದ ಹೊರ ಬಂದು ಪತನಗೊಂಡಿದ್ದು 23 ಜನ ಸಾವನ್ನಪ್ಪಿರುವ ಘಟನೆ ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ
ಥೈಲ್ಯಾಂಡ್ ನಿಂದ ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಮಾನವು ಲ್ಯಾಂಡಿಂಗ್ ವೇಳೆ ಗೇರ್ ಅಸಮರ್ಪಕವಾಗಿ ಕಾರ್ಯನಿರ್ವಹಿಸದ ಪರಿಣಾಮ ಪೈಲೆಟ್ ನ ನಿಯಂತ್ರಣ ತಪ್ಪಿ ರನ್ ವೇ ಬಿಟ್ಟು ಹೊರ ಬಂದಿದೆ.
ರನ್ ವೇ ಯಿಂದ ಹೊರಬರುತ್ತಿದ್ದಂತೆ ವಿಮಾನ ಪತನಗೊಂಡಿದ್ದು, 23 ಜನ ಸಾವನ್ನಪ್ಪಿದ್ದು, ಹಲವಾರು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇನ್ನು ವಿಮಾನದಲ್ಲಿ ಸುಮಾರು 175ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ರಕ್ಷಣೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ