Kannada NewsLatestWorld

*ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ವಿಮಾನ*

ಪ್ರಗತಿವಾಹಿನಿ ಸುದ್ದಿ: ದುಬೈ ನಿಂದ ಹಾಂಗ್ ಕಾಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲ್ಯಾಂಡ್ ಆಗುವ ವೇಳೆ ನಿಯಂತ್ರಣ ತಪ್ಪಿ ಕಾರ್ಗೋ ವಿಮಾನ ಸಮುದ್ರಕ್ಕೆ ಬಿದ್ದಿರುವ ಘಟನೆ ನಡೆದಿದೆ.

ದುಬೈ ನಿಂದ ಬಂದಿದ್ದ ಕಾರ್ಗೋ ಏರ್‌ಎಸಿಟಿ ಲಿವರಿ ಹೊಂದಿರುವ ಬೋಯಿಂಗ್ 747 ಸರಕು ವಿಮಾನವು ಹಾಂಗ್ ಕಾಂಗ್ ವಿಮಾನ ನಿಲ್ದಾಣದಲ್ಲಿ ರನ್ ವೇ ನಲ್ಲಿ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದಿದ್ದು ಪರಿಣಾಮ ವಿಮಾನದ ಹಿಂಭಾಗ ಸಂಪೂರ್ಣ ಮುರಿದು ಹೋಗಿದೆ.

ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ಹಾಂಗ್ ಕಾಂಗ್ ವಿಮಾನ ನಿಲ್ದಾಣ ಹೇಳಿಕೆಯಲ್ಲಿ ತಿಳಿಸಿದೆ. ವಿಮಾನ ರನ್ ವೇ ನಲ್ಲಿ ಲ್ಯಾಂಡ್ ಆಗುವ ವೇಳೆ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ. ಈ ವೇಳೆ ವಾಹನದೊಳಗಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button