Belagavi NewsBelgaum NewsKannada NewsKarnataka NewsPolitics

*ಬೆಳಗಾವಿಯಲ್ಲೇ ಮುಂಗಾರು ಅಧಿವೇಶ: ಸಚಿವ ಹೆಚ್.ಕೆ. ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮುಂಬರುವ ಜಂಟಿ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲೇ ನಡೆಸಲಾಗುವುದು, ಈ ವಿಚಾರದಲ್ಲಿ ಸಾರ್ವಜನಿಕರಿಗೆ ಯಾವುದೇ ಗೊಂದಲ ಬೇಡ ಮತ್ತು ಸ್ಥಳ ಬದಲಾವಣೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಗದಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಅಧಿವೇಶನ, ಇಂಧನ ದರ ಏರಿಕೆ ಹಾಗೂ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.

Home add -Advt

ಅಧಿವೇಶನ ಕರೆಯುವ ಬಗ್ಗೆ ಇನ್ನು ಸಚಿವ ಸಂಪುಟ ಅಧಿಕೃತವಾಗಿ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಮುಂಬರುವ ಮೇ 29 ರಂದು ಮತ್ತೊಮ್ಮೆ ಸಚಿವ ಸಂಪುಟ ಸಭೆ ಸೇರುವ ಸಾಧ್ಯತೆಯಿದ್ದು, ಆ ಸಭೆಯಲ್ಲಿ ಅಧಿವೇಶನದ ದಿನಾಂಕಗಳನ್ನು ಅಧಿಕೃತವಾಗಿ ಅಂತಿಮಗೊಳಿಸುತ್ತೇವೆ ಎಂದು ತಿಳಿಸಿದರು.

Related Articles

Back to top button