Election NewsKannada NewsKarnataka NewsPolitics

ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದವರ ಪರಿಸ್ಥಿತಿ ದುರದೃಷ್ಟಕರ: ರಘುಪತಿ ಭಟ್ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

ಪ್ರಗತಿವಾಹಿ‌ನಿ ಸುದ್ದಿ:  ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್‌ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗಳಿದ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಆದರೆ ಸಂಸದ ಪ್ರತಾಪ್ ಸಿಂಹ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರ ಬ್ಯಾಟ್‌ ಬೀಸಿದ್ದಾರೆ

ಪಕ್ಷದಿಂದ ಉಚ್ಚಾಟನೆಗೊಂಡ ರಘುಪತಿ ಭಟ್ ಗೆ ಹಿಜಾಬ್‌ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಕೌಂಟರ್‌ ನೀಡಿ, “ಅಂದು ನಾನು ಶಾಲೆಯಿಂದ ಉಚ್ಚಾಟನೆ ಆಗುವ ಹಾಗೆ ಮಾಡಿದ್ದೀರಿ, ಆದರೆ ಇಂದು ನಿವು ಕೂಡಾ ಪಕ್ಷದಿಂದ ಉಚ್ಛಾಟನೆ ಆಗಿದ್ದೀರಿ” ಎಂದು ಆಲಿಯಾ ಹೇಳಿದ್ದಳು.‌ ಈ ಎಲ್ಲಾ ಬೆಳವಣಿಗೆಳನ್ನು ಗಮನಿಸಿದ ಕೊಡಗು -ಮೈಸೂರು ಸಂಸದ ಪ್ರತಾಪ್‌ ಸಿಂಹ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಪರ ಸಾಮಾಜಿಕ ಜಾಲತಾಣದಲ್ಲಿ ಬ್ಯಾಟ್‌ ಬಿಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಂಸದ ಪ್ರತಾಪ್‌ ಸಿಂಹ, ‘ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ ಎಂಎಲ್‌ಎ ಟಿಕೆಟ್ ಸಿಗಲಿಲ್ಲ, ಎಂಎಲ್‌ಸಿ ಟಿಕೆಟ್ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆಗೆ ಒಳಗಾಗಿ ಬುರ್ಖಾ ಸ್ಪೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದಿದ್ದಾರೆ.

ಸಂಸದ ಪ್ರತಾಪ ಸಿಂಹ ರಘುಪತಿ ಭಟ್ ಪರ ಹೇಳಿಕೆ ನೀಡಿದ್ದು, ರಾಜಕೀಯ ವಲಯದಲ್ಲಿ ನಾನಾ ರೀತಿಯ ಚರ್ಚೆಗಳು ಶುರು ಆಗಿದೆ.‌

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button