Kannada NewsKarnataka NewsNationalPolitics

*ರಷ್ಯಾದ ಪ್ರವಾಸಿಗರಿಗೆ ಇ-ವೀಸಾ: ಪ್ರಧಾನಿ ಮೋದಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಷ್ಯಾದ ಪ್ರವಾಸಿಗರಿಗೆ ಭಾರತ ಇ-ವೀಸಾ ನೀಡಲಿದೆ. ಇದನ್ನು 30 ದಿನಗಳಲ್ಲಿ ಇ-ವೀಸಾಗಳ ಪ್ರಕ್ರಿಯೆ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

2 ದಿನಗಳ ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. 

ಮೊದಲ ಇ-ಟೂರಿಸ್ಟ್ ವೀಸಾ ಮತ್ತು ಗುಂಪು ಪ್ರವಾಸಿ ವೀಸಾ ಸೇವೆಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಮೋದಿ ಹೇಳಿದ್ದಾರೆ. ಈ ವೀಸಾ ಉಚಿತವಾಗಿರುತ್ತದೆ.

ಭಾರತ ಮತ್ತು ರಷ್ಯಾ ಎರಡೂ ದೇಶಗಳ ನಡುವೆ ಆರ್ಥಿಕ ಸಹಕಾರವನ್ನು ಹೆಚ್ಚಿಸಲು ವಿಷನ್- 2030 ದಾಖಲೆಗೆ ಸಹಿ ಹಾಕಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಉಪಕ್ರಮವು ಎರಡೂ ರಾಷ್ಟ್ರಗಳಿಗೆ ಹಲವಾರು ವ್ಯಾಪಾರ ಮಾರ್ಗಗಳನ್ನು ತೆರೆಯುತ್ತದೆ ಎಂದು ಅವರು ತಿಳಿಸಿದ್ದಾರೆ. “ಆರ್ಥಿಕ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು, ನಾವು ವಿಷನ್ 2030 ದಾಖಲೆಗೆ ಸಹಿ ಹಾಕಿದ್ದೇವೆ. ಇಂದು ನಾವಿಬ್ಬರೂ ಭಾರತ-ರಷ್ಯಾ ವ್ಯಾಪಾರ ವೇದಿಕೆಯಲ್ಲಿ ಭಾಗವಹಿಸುತ್ತೇವೆ. ಈ ವೇದಿಕೆಯು ನಮ್ಮ ವ್ಯವಹಾರ ಸಂಬಂಧಗಳನ್ನು ಬಲಪಡಿಸುತ್ತದೆ ಎಂದು ನನಗೆ ವಿಶ್ವಾಸವಿದೆ. ಯುರೇಷಿಯನ್ ಆರ್ಥಿಕ ಒಕ್ಕೂಟದೊಂದಿಗೆ FTA ಅನ್ನು ಸಾಕಾರಗೊಳಿಸಲು ಎರಡೂ ದೇಶಗಳು ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ” ಎಂದು ಮೋದಿ ಹೇಳಿದ್ದಾರೆ.

Home add -Advt

Related Articles

Back to top button