
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ ವಂದೇ ಭಾರತ್ ಮೂರು ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಬಿಜೆಪಿ 13 ನಾಯಕರಿಗೆ ಮಾತ್ರ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ. ನಿನೆವರೆಗೆ 10 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇಂದು ಬಿಜೆಪಿ 13 ನಾಯಕರಿಗೆ ವೇದಿಕೆಯಲ್ಲಿ ಅವಕಾಶ ನೀಡಲಾಗಿದೆ.
ಎಲೆಕ್ಟ್ರಾನಿಕ್ ಸಿಟಿಯ ಆಡಿಟೋರಿಯಂ ನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಡಾ.ಮಂಜುನಾಥ್, ಮನೋಹರ್ ಲಾಲ್, ಅಶ್ವಿನ್ ವೈಷ್ಣವ್, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಸೇರಿ 13 ನಾಯಕರಿಗೆ ಅವಕಾಶ ನೀಡಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಭೈರತಿ ಸುರೇಶ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ.