Kannada NewsKarnataka NewsNationalPolitics

*ಹಾಸನ ಘಟನೆಗೆ ಸಂತಾಪ ಸೂಚಿಸಿ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಗಣೇಶ ಮೆರವಣಿಗೆ ವೇಳೆ ಹಾಸನದಲ್ಲಿ  ನಡೆದ ಅಪಘಾದಲ್ಲಿ 9 ಜನ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರಿಗೆ ಗಾಯವಾಗಿದೆ. ಈ ಘಟನೆ ಸಂಬಂಧ ಈಗಾಗಲೇ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರವು ಪರಿಹಾರ ಘೋಷಣೆ ಮಾಡಿದೆ

ಇದೀಗ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಇದೀಗ ಈ ಬಗ್ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯಿಸಿದ್ದು, ಇದೊಂದು ಹೃದಯವಿದ್ರಾವಕ ಘಟನೆ ಮೃತರ ಆತ್ಮಕ್ಕೆ ಶಾಂತಿ ಕೋರಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೃತ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.

ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ 50,000 ಘೋಷಣೆ ಮಾಡಿದ್ದಾರೆ. 

Home add -Advt

Related Articles

Back to top button