*ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ತಾರಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಿದ್ದು, ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಲಾದ ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ತಾರಾಲಯವನ್ನು ಉದ್ಘಾಟನೆ ಮಾಡಿದರು.
ಈ ನವೀನ ತಾರಾಲಯವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಪ್ರಗತಿಯನ್ನು ಪ್ರದರ್ಶಿಸುತ್ತದೆ. ಟಿಲ್ಟೆಡ್ ಎಲ್ಇಡಿ ತಂತ್ರಜ್ಞಾನವನ್ನು ಹೊಂದಿರುವ ಇದು ವಿಶ್ವದಲ್ಲೇ ಪ್ರಥಮವಾಗಿದ್ದು, ಖಗೋಳಶಾಸ್ತ್ರ ಮತ್ತು ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಜನರಲ್ಲಿ ಆಸಕ್ತಿ ಮೂಡಿಸಲು ಸಹಾಯಕವಾಗಿದೆ. ಈ ತಾರಾಲಯವು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಶೈಕ್ಷಣಿಕ ಅನುಭವವನ್ನು ನೀಡಲು ವಿನ್ಯಾಸಗೊಳಿಸಲಾಗಿದೆ. ಇದು ಮೈಸೂರಿನ ಪ್ರಮುಖ ಪ್ರವಾಸಿ ಆಕರ್ಷಣೆಯಾಗಿಯೂ ಕಾರ್ಯನಿರ್ವಹಿಸಲಿದೆ.
ಈ ಯೋಜನೆಯು ಭವಿಷ್ಯದ ಪೀಳಿಗೆಗೆ ವಿಜ್ಞಾನದ ಮಹತ್ವವನ್ನು ಸಾರಲಿದೆ. ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳ ಪದಗಳನ್ನು ಬಳಸಿ ಮೈಸೂರು ಹೆಸರನ್ನು ರೂಪಿಸಿರುವುದು ವಿಶೇಷವಾಗಿದೆ. ಇದೇ ಮೊದಲ ಬಾರಿಗೆ 15 ಡಿಗ್ರಿ ಓರೆಯಾಗಿರುವ ಎಲ್ಇಡಿ ಡೋಮ್ ಪ್ಲಾನೆಟೋರಿಯಂ ಅನ್ನು ನಿರ್ಮಿಸಲಾಗಿದೆ.
ಮೈಸೂರು ವಿಶ್ವವಿದ್ಯಾಲಯವು 3.5 ಎಕರೆ ಪ್ರದೇಶದಲ್ಲಿ, ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರದ ಆವರಣದಲ್ಲಿ ಈ ತಾರಾಲಯವನ್ನು ನಿರ್ಮಿಸಿದ್ದು, ಸುಮಾರು 115 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಾಲ ಸೀತಾರಾಮನ್, ರಾಜ್ಯಪಾಲೆ ಡಾ. ಸುಧಾ ಯಾದವ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ , ಸಚಿವ ಬಸವರಾಜ್ ರಾಯರೆಡ್ದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




