

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಇಂದು ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.
ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಪ್ರಧಾನಿ ಮೋದಿ, ಹಳದಿ ಲೈನ್ ಮೆಟ್ರೋ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಡಾ.ಮಂಜುನಾಥ್, ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಳಿಕ ಹಳದಿ ಮಾರ್ಗದ ಮೆಟ್ರೋದಲ್ಲಿ ಪ್ರಧಾನಿ ಮೋದಿ ಆರ್‌ವಿ ರಸ್ತೆ (ರಾಗಿಗುಡ್ಡ) ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಮೆಟ್ರೋದಲ್ಲಿ ಪ್ರಯಾಣ್ ಬೆಳೆಸಿದರು. ಪ್ರಧಾನಿ ಮೋದಿ ಪ್ರಯಾಣಿಸಿದ ಈ ಮೆಟ್ರೋಗೆ ಮಹಿಳೆ ವಿನುತಾ ಲೋಕೋ ಪೈಲಟ್ ಆಗಿ ಕಾರ್ಯನಿರ್ವಹಿಸಿದ್ದಾರೆ.
ಬೆಂಗಳೂರಿನ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT) ಗೆ ಪ್ರಯಾಣಿಸಲಿದ್ದಾರೆ. ಅಲ್ಲಿ ಬೆಂಗಳೂರು ಮೆಟ್ರೋ ಹಂತ-3ಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.