Latest

ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 4,000 ಸಹಾಯಧನ: ಮೋದಿ ಘೋಷಣೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೋವಿಡ್ ನಿಂದಾಗಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಪ್ರಧಾನಿ ನರೇಂದ್ರ ಮೋದಿ ತಿಂಗಳಿಗೆ 4,000 ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ 8 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಸ್ಕೀಂ ಅಡಿಯಲ್ಲಿ ಒರಿನಾದಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಾಸಿಕ 4 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದರು.

18-23 ವರ್ಷದ ಯುವಕರಿಗೆ ಮಾಸಿಕ ಸ್ಟೈಫಂಡ್ ನೀಡಲು ನಿರ್ಧರಿಸಲಾಗಿದ್ದು, 23 ವರ್ಷ ಪೂರೈಸಿದ ಬಳಿಕ 10 ಲಕ್ಷ ರೂಪಾಯಿಗಳ ಸಹಾಯ ಧನ ಸಿಗಲಿದೆ. ವೃತ್ತಿಪರ ಕೋರ್ಸ್ ಗಳಿಗೆ, ಉನ್ನತ ಶಿಕ್ಷಣಕ್ಕೆ ಎಜುಕೇಷನ್ ಲೋನ್ ಅಗತ್ಯವಿದ್ದರೆ ಅದಕ್ಕೆ ಪಿಎಂ ಕೇರ್ಸ್ ಸಹಾಯ ಮಾಡಲಿದೆ ಎಂದು ಹೇಳಿದರು.

ಟೋಪಿ ಹಾಕಿಕೊಂಡು ಬಂದ ವಿದ್ಯಾರ್ಥಿ ಮೇಲೆ ಹಲ್ಲೆ; ಪ್ರಿನ್ಸಿಪಾಲ್ ಸೇರಿ 7 ಜನರ ವಿರುದ್ಧ ಎಫ್ ಐ ಆರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button