ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಾಳೆ ದೇಶಾದ್ಯಂತ ಮೊದಲ ಹಂತದ ಲಾಖ್ ಡೌನ್ ಅಂತ್ಯವಾಗಲಿದ್ದು, ಎರಡನೇ ಹಂತದ ಲಾಕ್ ಡೌನ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವಿರುದ್ಧ ಹೋರಾಟಕ್ಕೆ ಎರಡನೆ ಹಂತದ ಲಾಕ್ ಡೌನ್ ಬಗ್ಗೆ ಪ್ರಧಾನಿ ಮೋದಿ ಮುಂದೆ ಯಾವೆಲ್ಲಾ ನಿರ್ಧಾರಗಳು ಇವೆ ಎಂಬುದು ಕುತೂಹಲವನ್ನು ಹೆಚ್ಚಿಸಿದೆ.
ನಾಳೆಯಿಂದ ಎರಡನೇ ಹಂತದ ಲಾಕ್ ಡೌನ್ ಆರಂಭವಾಗಲಿರುವ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮತ್ತೊಮ್ಮೆ ಮಾತನಾಡಲಿದ್ದಾರೆ. ಅರ್ಥಿಕತೆಗೆ ತೊಂದರೆಯಾಗದಂತೆ, ಜನತೆ ಸಂಕಷ್ಟವನ್ನು ನೀಗಿಸುವ ನಿಟ್ಟಿನಲ್ಲಿ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಲಿದ್ದಾರಾ ಎಂಬ ನಿರೀಕ್ಷೆ ಹೆಚ್ಚಿದೆ.
ಭಾರದಲ್ಲಿ ಲಾಕ್ಡೌನ್ ಅವಧಿಯನ್ನು ವಿಸ್ತರಿಸುವ ಮತ್ತು ಕೇಂದ್ರ ಸರ್ಕಾರ ಕೋವಿಡ್-19 ತಡೆಗೆ ತೆಗೆದುಕೊಳ್ಳಲಿರುವ ಮುಂದಿನ ಕ್ರಮಗಳ ಬಗ್ಗೆ ಪ್ರಧಾನಿ ಅಧಿಕೃತ ಘೋಷಣೆ ಮಾಡಲಿದ್ದಾರೆ.
ಕೊರೋನಾ ವಿರುದ್ಧ ಹೋರಾಡಲು ಜಾರಿ ಮಾಡಲಾಗಿದ್ದ 21 ದಿನಗಳ ಲಾಕ್ಡೌನ್ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿರು. ಈ ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ಡೌನ್ ಮುಂದುವರಿಸಲು ಸಲಹೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೂಚನೆ ನೀಡಿದ ಬೆನ್ನಲ್ಲೇ ಒರಿಸ್ಸಾ, ಪಂಜಾಬ್, ಮಹಾರಾಷ್ಟ್ರ, ಈಗ ಪಶ್ಚಿಮ ಬಂಗಾಳ, ಕರ್ನಾಟಕ ಏ.30ರವರೆಗೆ ಲಾಕ್ಡೌನ್ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ