ಪ್ರಗತಿವಾಹಿನಿ ಸುದ್ದಿ; ನವದೆಹಲಿ: 1913ರಲ್ಲಿ ಭಾರತದಿಂದ ಕದ್ದೊಯ್ಯಲಾಗಿದ್ದ ಅನ್ನಪೂರ್ಣಾ ದೇವಿ ವಿಗ್ರಹವನ್ನು ಕೆನಡಾದಿಂದ ವಾಪಸ್ ತರಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಜನಪ್ರಿಯ ರೆಡಿಯೋ ಕಾರ್ಯಕ್ರಮ 71ನೇ ಮನ್ ಕೀ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಈ ವಿಗ್ರಹವನ್ನು ಉತ್ತರ ಪ್ರದೇಶದ ವಾರಾಣಸಿಯಿಂದ 1913ರಲ್ಲಿ ಕಳ್ಳತನ ಮಾಡಿ ಕದ್ದೊಯ್ಯಲಾಗಿತ್ತು. ಇದೀಗ ಆ ಪ್ರತಿಮೆಯನ್ನು ವಾಪಸ್ ತರಲಾಗುತ್ತಿದೆ ಎಂಬುದು ಸಂತಸದ ವಿಚಾರ ಎಂದರು.
ನ್ಯೂಜಿಲ್ಯಾಂಡ್ ನ ಸಂಸದರಾಗಿ ಆಯ್ಕೆಯಾಗಿರುವ ಡಾ.ಗೌರವ್ ಶರ್ಮಾ, ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿರುವುದು ಭಾರತೀಯ ಸಂಸ್ಕೃತಿಯ ಗೌರವ ಹೆಚ್ಚಿಸಿದೆ ಎಂದು ಶ್ಲಾಘಿಸಿದ ಪ್ರಧಾನಿ, ಅಜಂತಾ ಗುಹೆ ಸೇರಿದಂತೆ ಪಾರಂಪರಿಕ ತಾಣಗಳನ್ನು ಡಿಜಿಟಲೀಕರಣಗೊಳಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ