ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರೈತರ ಪ್ರತಿಭಟನೆ, ಹಿಂಸಾಚಾರ ಹೆಚ್ಚಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾನೂನು ಒಂದುವರೆ ವರ್ಷಗಳ ಕಾಲ ತಡೆ ಹಿಡಿಯಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದ್ದು, ಸಭೆಯಲ್ಲಿ ವಿವಾದಿತ ಕೃಷಿ ತಿದ್ದುಪಡಿ ಕಾನೂನಿನ ಬಗ್ಗೆ ಪ್ರಸ್ತಾಪಿಸಿ, 18 ತಿಂಗಳ ಕಾಲ ಕೃಷಿ ಕಾನೂನು ಜಾರಿಗೆ ಬರದಂತೆ ತಡೆ ಹಿಡಿಯಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.
ಸರ್ಕಾರ ರೈತರ ಮುಂದೆ ಇಟ್ಟಿರುವ ಪ್ರಸ್ತಾವನೆ ಬಗ್ಗೆ ಚರ್ಚಿಸಲು ಹಾಗೂ ಜಾರಿಗೊಳಿಸಲು ಈಗಲೂ ಸಿದ್ಧವಿದೆ. ಎಲ್ಲಾ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು. ಎಲ್ಲರೂ ದೇಶದ ಹಿತದೃಷ್ಟಿಯಿಂದ ಯೋಚಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ವಿವಾದಿತ ಕೃಷಿ ಕಾನೂನು ಜಾರಿಗೆ ಸುಪ್ರೀಂ ಕೋರ್ಟ್ ತಡೆಯೊಡ್ದಿದ ಬೆನ್ನಲ್ಲೇ ಕೇಂದ್ರ ಸರ್ಕಾರ 18 ತಿಂಗಳ ಕಾಲ ಕಾನೂನು ಜಾರಿಗೆ ತಡೆ ನೀಡುವುದಾಗಿ ಹೇಳಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜಂಟಿ ಸಮಿತಿ ರಚಿಸುವ ಪ್ರಸ್ತಾವನೆಯನ್ನು ರೈತರ ಮುಂದೆ ಇಟ್ಟಿತ್ತು. ಆದರೆ ಇದನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದವು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ