ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನಲೆಯಲ್ಲಿ ಪ್ರಧಾನಿ ಮೋದಿ, 7 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದು, ಸಭೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕು ಹೆಚ್ಚುತ್ತಿರುವ 7 ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ದೆಹಲಿ, ಉತ್ತರ ಪ್ರದೇಶ, ಪಂಜಾಬ್ ಸಿಎಂಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ ನಡೆಸಿದರು. ಸಭೆಯಲ್ಲಿ ಕೊರೊನಾ ಸೋಂಕು ನಿಯಂತ್ರಣದ ಬಗ್ಗೆ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ದೇಶದಲ್ಲಿ ಆರ್ಥಿಕ ಹಿಂಜರಿತವುಂಟಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಅಗತ್ಯವಿಲ್ಲ. ರಾಜ್ಯ ಸರ್ಕಾರಗಳು ಜನಸಾಮಾನ್ಯರು ಸೋಂಕಿನ ಬಗ್ಗೆ ಜಾಗೃತಿ ವಹಿಸುವಂತೆ ಸೂಚಿಸಬೇಕು ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಸಭೆ ಬಗ್ಗೆ ಮಾತನಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ನಿನ್ನೆ ನಡೆದ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಚರ್ಚೆಯೇ ಆಗಿಲ್ಲ. ಕರ್ನಾಟಕದಲ್ಲಾಗಲಿ, ಬೆಂಗಳೂರಿನಲ್ಲಾಗಲಿ ಮತ್ತೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ. ಮೈಕ್ರೋ ಕಂಟೇನ್ಮೆಂಟ್ ಹಾಗೂ ಮ್ಯಾಕ್ರೋ ವಲಯಗಳಲ್ಲಿ ಹೆಚ್ಚು ಜಾಗೃತೆ ವಹಿಸಿ, ಸೋಂಕು ನಿಯಂತ್ರಣಕ್ಕೆ ಗಮನವಹಿಸುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ