ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಬಿಕ್ಕಟ್ಟಿನಿಂದ ರಕ್ಷಿಸಿಕೊಳ್ಳುವಲ್ಲಿ ಭಾರತ ಬಹಳ ಮಟ್ಟಿಗೆ ಯಶಸ್ವಿಯಾಗಿದೆ. ಅಂತರ ಕಾಯ್ದುಕೊಳ್ಳದಿದ್ದಲ್ಲಿ ದೊಡ್ಡ ದುರಂತ ಸಂಭವಿಸಲಿದೆ. ಗ್ರಾಮಗಳಿಗೆ ಸೋಂಕು ಹರಡದಂತೆ ಎಚ್ಚರಿಕೆ ವಹಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.
ಮೂರನೇ ಹಂತದ ಲಾಕ್ ಡೌನ್ ಅವಧಿ ಮೇ 17ರಂದು ಮುಕ್ತಾಯವಾಗಲಿದ್ದು, ರಾಜ್ಯಗಳಲ್ಲಿ ಕರೊನಾ ವೈರಸ್ ಸ್ಥಿತಿಗತಿಗಳ ಬಗ್ಗೆ ಹಾಗೂ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಮತೋಲಿತ ಕಾರ್ಯತಂತ್ರದೊಂದಿಗೆ ಕಾರ್ಯನಿರ್ವಹಿಸುವಂತೆ ಹಾಗೂ ಎಲ್ಲರ ಸಲಹೆಗಳಿಂದ ಮಾರ್ಗಸೂಚಿಗಳನ್ನು ರೂಪಿಸುವಂತೆ ತಿಳಿಸಿದರು.
ಈ ಬಿಕ್ಕಟ್ಟಿನಿಂದ ರಕ್ಷಿಸಿಕೊಳ್ಳುವಲ್ಲಿ ಭಾರತ ಬಹಳ ಮಟ್ಟಿಗೆ ಯಶಸ್ವಿಯಾಗಿದೆ. ರಾಜ್ಯಗಳು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿವೆ. ಸಾಮಾಜಿಕ ಅಂತರ ನಿಯಮ ಸಡಿಲವಾಗಿದ್ದರೆ ಬಿಕ್ಕಟ್ಟು ಹೆಚ್ಚಾಗುತ್ತಿತ್ತು. ಲಾಕ್ಡೌನ್ ಅನ್ನು ಹೇಗೆ ನಿಭಾಯಿಸುತ್ತಿದ್ದೇವೆ ಎಂಬುದು ದೊಡ್ಡ ವಿಷಯ. ಇದರಲ್ಲಿ ಎಲ್ಲರದ್ದೂ ಪ್ರಮುಖ ಪಾತ್ರವಿದೆ. ಕೊರೊನಾ ಬಿಕ್ಕಟ್ಟು ಗ್ರಾಮಗಳಿಗೆ ಹರಡಬಾರದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ