Karnataka NewsLatest

*ಒಂದು ವಾರ ಭಾರಿ ಮಳೆ: ಮನೆಯಿಂದ ಹೊರ ಬರುವ ಮುನ್ನ ಈ ಸುದ್ದಿ ನೋಡಿ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಸೆಪ್ಟೆಂಬರ್ 6 ರವೆರೆಗೂ ವರುಣಾರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಒಂದು ವಾರ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಬೀಳಲಿದ್ದು, ಗುಡುಗು ಹಾಗೂ ಬಿರುಗಾಳಿ ಸಹಿತ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Home add -Advt

ಮುಂದಿನ 3 ದಿನ ಬೆಂಗಳೂರಲ್ಲಿ ಮೋಡಗಳು ಆವರಿಸಿದ್ದು ಗುಡುಗು-ಮಿಂಚಿನ ಸಹಿತ ಮಳೆಯ ಸಾಧ್ಯತೆ ಇದೆ. 

ಉತ್ತರ ಕನ್ನಡ ದಕ್ಷಿಣ ಕನ್ನಡ, ಉಡುಪಿಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದ‌ರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯದಲ್ಲಿ ಮಳೆಯಾಗಲಿದೆ. ಹಾಗೆಯೇ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಉಡುಪಿ ಜಿಲ್ಲೆಗಳಿಗೆ ಭಾರೀ ಮತ್ತು ಅತಿ ಭಾರೀ ಮಳೆಗೆ ಸಂಬಂಧಿಸಿದಂತೆ ಆರೇಂಜ್ ಅಲರ್ಟ್ ಜಾರಿ ಮಾಡಲಾಗಿದೆ. ಹಾಗೆಯೇ ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯ ಸಾಧ್ಯತೆಯನ್ನು ಗಮನಿಸಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಸೆಪ್ಟೆಂಬರ್ 1 ರಿಂದ 3 ರವರೆಗೆ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ. 

Related Articles

Back to top button