Latest

*ನಾಳೆ ಬಂಡಿಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ಮೋದಿ ಭೇಟಿ; ಹೆದ್ದಾರಿ ಸಂಚಾರ ಸಂಪೂರ್ಣ ಬಂದ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹುಲಿ ಸಂರಕ್ಷಿತ ಅರಣ್ಯ ಎಂದು ಘೋಷಿಸಿ 50 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ಬಂಡಿಪುರ ಅಭ್ಯಯಾರಣ್ಯಕ್ಕೆ ಭೇಟಿ ನೀಡಲಿದ್ದು, ಸಫಾರಿ ನಡೆಸಲಿದ್ದಾರೆ.

ಇಂದು ರಾತ್ರಿ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ರ್ಯಾಡಿಸನ್ ಬ್ಲ್ಯೂ ಹೊತೆಲ್ ನಲ್ಲಿ ವಾಸ್ತವ್ಯ ಹೋಡಲಿದ್ದಾರೆ. ಬಳಿಕ ನಾಳೆ ಬೆಳಿಗ್ಗೆ 6:20ಕ್ಕೆ ಬಂಡೀಪುರಕ್ಕೆ ತೆರಳಲಿದ್ದಾರೆ.

Related Articles

ಬಂಡಿಪುರದಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಲಿದ್ದಾರೆ. ಬಳಿಕ ಅಂಚೆ ಲಕೋಟೆ ಬಿಡುಗಡೆ ಮಾಡಲಿದ್ದಾರೆ. ಬಳಿಕ ಸಫಾರಿ ನಡೆಸಲಿರುವ ಪ್ರಧಾನಿ ಮೋದಿ ಮದುಮಲೈ ಅರಣ್ಯ ಪ್ರದೇಶಕ್ಕೆ ತೆರಳಿ ಅಲ್ಲಿ ತೆಪ್ಪಕಾಡು ಆನೆಕ್ಯಾಂಪ್ ನಲ್ಲಿ ಬೊಮ್ಮ ಮತ್ತು ಬೆಳ್ಳಿ ದಂಪತಿಯನ್ನು ಸನ್ಮಾನಿಸಲಿದ್ದಾರೆ.

ಬಂಡಿಪುರದಲ್ಲಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಂಡೀಪುರ ಹಾಗೂ ಮಧುರೈ ಮಾರ್ಗವಾಗಿ ಸಂಚರಿಸುವ ಎಲ್ಲಾ ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿದೆ. ದೇಶದ 12 ಹುಲಿ ಯೋಜನೆಗಳ ನಿರ್ದೇಶಕರ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಇಂದು ಸಂಜೆ 4 ಗಂಟೆಯಿಂದ ನಾಳೆ ಮಧ್ಯಾಹ್ನ 12 ಗಂಟೆಯವರೆಗೆ ಬಂಡೀಪುರ ಮಾರ್ಗವಾಗಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 181 ಹಾಗೂ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 ನ್ನು ಸಂಪೂರ್ಣವಾಗಿ ಬಂದ್ ಆಗಲಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

https://pragati.taskdun.com/karnatakaheavy-rain4-people-death/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button