Kannada NewsLatest

*ಬೆಳಗಾವಿ: ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ನನ್ನ ಬಂಧು ಬಗಿನಿಯರಿಗೆ ನಮಸ್ಕಾರಗಳು ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಭಾಷಣ ಆರಂಭಿಸಿದ್ದಾರೆ.

ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕನ್ನಡದಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರದ ಸ್ಫೂರ್ತಿಯಾದ ಬಸವಣ್ನವರಿಗೆ ನಮಸ್ಕಾರಗಳು. ಬೆಳಗಾವಿಯ ಜನತೆಯ ಪ್ರೀತಿ ಮರೆಯಲಾಗದು. ಬೆಳಗಾವಿಗೆ ಬರುವುದು ಯಾವುದೇ ತೀರ್ಥಯಾತ್ರೆಗಿಂತ ಕಡಿಮೆಯಿಲ್ಲ. ಇದು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರ ಪುಣ್ಯಭೂಮಿ ಎಂದರು.

ನವಭಾರತ ನಿರ್ಮಾಣದಲ್ಲಿ ಬೆಳಗಾವಿ ಕೊಡುಗೆ ಸಾಕಷ್ಟಿದೆ. ಬೆಳಗಾವಿ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

*ಬೆಳಗಾವಿ: ಪ್ರಧಾನಿ ಮೋದಿ ರೋಡ್ ಶೋ ಆರಂಭ*

Home add -Advt

https://pragati.taskdun.com/belagavipm-narendra-modiroad-show/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button