ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿ, 27 ಹೊಸ ಸಚಿವರಿಗೆ ಸ್ಥಾನ ನೀಡಲು ಚಿಂತನೆ ನಡೆಸಿದ್ದಾರೆ. ಪ್ರಮುಖವಾಗಿ ಯುವ ಮುಖಗಳಿಗೆ ಆದ್ಯತೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಜುಲೈನಲ್ಲಿ ಸಂಪುಟ ಪುನಾರಚನೆಗೆ ಯೋಜನೆ ರೂಪಿಸಿರುವ ಪ್ರಧಾನಿ ಮೋದಿ, ವಿವಿಧ ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ದೃಷೀಯಲ್ಲಿಟ್ಟುಕೊಂಡು ಸಚಿವ ಸ್ಥಾನ ನೀಡಲು ಮುಂದಾಗಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನಾವಾಲ್, ಸುಶೀಲ್ ಮೋದಿ, ನಾರಾಯಣ್ ರಾಣೆ, ರಮೇಶ್ ಪೊಖ್ರಿಯಾಲ್ ಸೇರಿದಂತೆ ಹಲವರಿಗೆ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಗಲಿದೆ.
ಪ್ರಧಾನಿ ಮೋದಿ ಸಂಪುಟದಲ್ಲಿ ರಾಜ್ಯಕ್ಕೆ ಎರಡು ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದ್ದು, ದಿ.ಸುರೇಶ್ ಅಂಗಡಿ ಅವರಿಂದ ತೆರವಾದ ಸ್ಥಾನಕ್ಕೆ ಮತ್ತೊಬ್ಬ ಲಿಂಗಾಯಾಯತ ನಾಯಕರಿಗೆ ಅವಕಾಶ ನೀಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಮಣೆ ಹಾಕುವ ಸಾಧ್ಯತೆ ಇದೆ.
ಹಾವೇರಿ ಕ್ಷೇತ್ರದಿಂದ ಆಯ್ಕೆಯಾಗಿರುವ ಸಂಸದ ಶಿವಕುಮಾರ್ ಉದಾಸಿ ಅಥವಾ ಬೀದರ್ ಲೋಕಸಭಾ ಕ್ಷೇತ್ರದ ಭಗವಂತ ಕೂಬಾ ಅಥವಾ ಕಲಬುರ್ಗಿಯ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಗೆಲುವು ಸಾಧಿಸಿರುವ ಸಂಸದ ಉಮೇಶ್ ಜಾದವ್ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಯಡೂರಿನ ಕೋವಿಡ್ ಕೇರ್ ಸೆಂಟರ್ ಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ