ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು, ಅದಕ್ಕೂ ಮುನ್ನ ಪ್ರಧಾನಿ ಮೋದಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಕೊರೊನಾ ಸೋಂಕು ನಿಯಂತ್ರಣ ಹಾಗೂ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಕರ್ನಾಟಕ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಓಡಿಶಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೊದಿ ಸಭೆ ನಡೆಸಲಿದ್ದಾರೆ. ಕೇರಳದಲ್ಲಿ ಹೆಚ್ಚುತ್ತಿರುವ ಝಿಕಾ ವೈರಸ್ ಹಾಗೂ ವೈರಸ್ ತಡೆಗಟ್ಟುವಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ.
ಹಲವು ರಾಜ್ಯಗಳಲ್ಲಿ ಕೋವಿಡ್ ನಿಯಮಗಳ ಉಲ್ಲಂಘನೆ ಮಾಡಲಾಗುತಿದ್ದು, ಮಾಸ್ಕ್, ಸಾಮಾಜಿಕ ಅಂತರ ಪಾಲನೆಗೆ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆಯೂ ಸೂಚಿಸುವ ಸಾಧ್ಯತೆ ಇದೆ.
ಸಿಎಂ ಬಿಎಸ್ ವೈ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ, ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ನಡೆಸಿರುವ ಸಿದ್ಧತೆಗಳ ಬಗ್ಗೆ ವಿವರಿಸಲಿದ್ದಾರೆ.
ಇಂದು ದೆಹಲಿಗೆ ಹೋಗಲಿರುವ ಬಿಎಸ್ ವೈ: 3 ಪ್ರಮುಖ ಕಾರಣ
6 ರಾಜ್ಯಗಳ ಸಿಎಂ ಜೊತೆ ಶುಕ್ರವಾರ ಮೋದಿ ಮಹತ್ವದ ಸಭೆ: ಲಾಕ್ ಡೌನ್ ಬಗ್ಗೆ ಅಂದೇ ತೀರ್ಮಾನ ಸಾಧ್ಯತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ