
ಪ್ರಗತಿವಾಹಿನಿ ಸುದ್ದಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನಿ ಮೋದಿಯವರ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜ್ಯದ ಹಲವು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು. ವಿವಿಧ ಯೋಜನೆಗಳಿಗೆ ಅನುದಾನ ನೀಡುವಂತೆ ಕೋರಿದರು.

ನಬಾರ್ಡ್ ನೆರವು ಹೆಚ್ಚಳಕ್ಕೆ, ಭದ್ರಾ ಮೇಲ್ಡಂಡೆ ಯೋಜನೆಗೆ ಘೋಷಣೆಯಾಗಿರುವ ಅನುದಾನ ಬಿಡುಗಡೆ, ತ್ವರಿತ ನೀರಾವರಿ ಕಾಮಗಾರಿ ಕಾರ್ಯಕ್ರಮಕ್ಕೆ ನೆರವು, ಮೇಕೆದಾಟು ಯೋಜನೆ, ಮಹದಾಯಿ ನದಿಯ ಕಳಸಾಬಂಡೂರಿ ಯೋಜನೆಗಳತ್ತ ತುರ್ತು ಗಮನಕ್ಕೆ ಮನವಿ ಮಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ