ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಲಿದ್ದು, ಎರಡು ಮೇಡ್ ಇನ್ ಇಂಡಿಯಾ ಲಸಿಕೆ ಖರೀದಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಕೊರೊನಾ ಲಸಿಕೆ ವಿಚಾರವಾಗಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಭಾರತ್ ಬಯೋಟೆಕ್ ಹಾಗೂ ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಜೊತೆ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ಖರೀದಿಗೆ ಕೇಂದ್ರ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದು, ಸಿರಮ್ ನಿಂದ 1.1 ಕೋಟಿ ಕೋವಿಶಿಲ್ಡ್ ಲಸಿಕೆ ಖರೀದಿಸಲಾಗುವುದು ಎಂದರು.
ಮೊದಲ ಹಂತದಲ್ಲಿ 3 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಬಳಿಕ ಫ್ರಂಟ್ ಲೈನ್ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು. ಲಸಿಕಾ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ಜನವರಿ 16ರಿಂದ ವಿಶ್ವದ ಅತಿದೊಡ್ಡ ಲಸಿಕಾ ನೀಡಿಕೆ ಅಭಿಯಾನ ಆರಂಭವಾಗಲಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ