ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಬಳಕೆಗೆ ಭಾರತದಲ್ಲಿ ಡಿಸಿಜಿಐ ಅನುಮತಿ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂಶೋಧಕರು ಹಾಗೂ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಆಕ್ಸ್ ಫರ್ಡ್, ಆಸ್ಟ್ರಾಜನಿಕಾ ಸಂಸ್ಥೆ ತಯಾರಿಸುತ್ತಿರುವ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಸೆರಮ್ ಇನ್ ಸ್ಟಿಟ್ಯೂಟ್ ಅಭಿವೃದ್ಧಿ ಪಡಿಸುತ್ತಿದ್ದು, ಕೋವಿಶೀಲ್ಡ್ ಹಾಗೂ ಭಾರತ್ ಬಯೊಟೆಕ್ ಅಭಿವೃದ್ಧಿಪಡಿಸುತ್ತಿರುವ ಕೋವ್ಯಾಕ್ಸಿನ್ ಲಸಿಕೆಗೆ ಡಿಸಿಜಿಐ ಸಮ್ಮತಿ ಸೂಚಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶದ ಲಸಿಕೆಗೆ ಅನುಮತಿ ಸಿಕ್ಕಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಚಾರ. ಈ ಮೂಲಕ ಕೊರೊನಾ ವಿರುದ್ಧ ಹೋರಾಟಕ್ಕೆ ಇನ್ನಷ್ಟು ಬಲಬಂದಂತಾಗಿದೆ. ಆತ್ಮನಿರ್ಭರ ಭಾರತದ ಕನಸು ನನಸಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಸಂಶೋಧಕರು, ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ