
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿ ಹಿಂಸಾಚಾರಕ್ಕೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ನಾಯಕರ ಪ್ರಚೋದನಾಕಾರಿ ಹೇಳಿಕೆಯೇ ಕಾರಣ ಎಂಬ ಆರೋಪ ಹಿನ್ನಲೆಯಲ್ಲಿ ತಿರುಗೇಟು ನೀಡಿರುವ ಪ್ರಧಾನಿ ಮೋದಿ, ಶಾಂತಿ, ಸೌಹರ್ದತೆ ಮತ್ತು ಏಕತೆ ದೇಶದ ಅಭಿವೃದ್ಧಿಗೆ ಅವಶ್ಯಕವಾಗಿದೆ. ಆದರೆ, ಕೆಲ ಪಕ್ಷಗಳಿಗೆ ರಾಜಕೀಯ ಹಿತಾಸಕ್ತಿಯೇ ಹೆಚ್ಚು ಎಂದು ಹೇಳಿದ್ದಾರೆ.
ಸಂಸದೀಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿಗೆ ರಾಷ್ಟ್ರೀಯ ಹಿತಾಸಕ್ತಿಯೇ ಮುಖ್ಯ. ಸರ್ವರ ಏಳ್ಗೆ ನಮ್ಮ ಧ್ಯೇಯವಾಕ್ಯ. ಆದರೆ ಕೆಲ ಪಕ್ಷಗಳು ಮತಬ್ಯಾಂಕ್ ಗಾಗಿ ಶಾಂತಿ ಕದಡುವ ಯತ್ನ ನಡೆಸಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಗುಡುಗಿದ್ದಾರೆ.
ದೇಶದ ಅಭಿವೃದ್ಧಿ ನಮ್ಮ ಮಂತ್ರ. ಇದಕ್ಕೆ ಶಾಂತಿ, ಸೌಹಾರ್ದತೆ ಮತ್ತು ಏಕತೆ ಪ್ರಮುಖವಾಗಿದ್ದು, ಈ ಮೌಲ್ಯಗಳ ರಕ್ಷಣೆಗಾಗಿ ಬಿಜೆಪಿ ಸಂಸದರು ಮುಂದಾಗಬೇಕು ಎಂದು ಇದೇ ವೇಳೆ ಕರೆ ನೀಡಿದ್ದಾರೆ.
ಬಿಜೆಪಿ ನಾಯಕರ ದ್ವೇಷಪೂರಿತ ಹೇಳಿಕೆಗಳು ದೆಹಲಿ ಹಿಂಸಾಚಾರಕ್ಕೆ ಪ್ರೇರಣೆ ನೀಡಿವೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದು, ಇದೇ ವಿಚಾರ ಸಂಸತ್ ಕಲಾಪದಲ್ಲಿಯೂ ಗದ್ದಲಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ