ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಜೊತೆ ಸಂವಾದ ನಡೆಸುತ್ತಿದ್ದ ವೇಳೆ ಪ್ರಧಾನಿ ಮೋದಿ ಭಾವುಕರಾದ ಘಟನೆ ನಡೆದಿದೆ.
ಉತ್ತರ ಪ್ರದೇಶದ ವಾರಣಾಸಿ ಸ್ವಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ದಾದಿಯರು, ಅರೆ ವೈದ್ಯಕೀಯ ಸಿಬ್ಬಂದಿಗಳ ಜೊತೆ ಸಂವಾದ ನಡೆಸಿದ ಪ್ರಧಾನಿ ಮೋದಿ ವೈದ್ಯಕೀಯ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದರು. ಕಡಿಮೆ ಅವಧಿಯಲ್ಲಿ ಪಂಡಿತ್ ರಾಜನ್ ಮಿಶ್ರಾ ಕೋವಿಡ್ ಆಸ್ಪತ್ರೆಯನ್ನು ಸಜ್ಜುಗೊಳಿಸುವ ಮೂಲಕ ಆಕ್ಸಿಜನ್ ಬೆಡ್ ಹಾಗೂ ಐಸಿಯು ಬೆಡ್ ವ್ಯವಸ್ಥೆ ಕಲ್ಪಿಸುವ ಮೂಲಕ ವಾರಣಾಸಿ ಮಾದರಿಯಾಗಿದೆ ಎಂದರು.
ವಾರಣಾಸಿಯಲ್ಲಿ ಜಾರಿಗೆ ತಂದಿರುವ ಮೈಕ್ರೋ ಕಂಟೇನ್ಮೆಂಟ್ ಝೋನ್ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೆಳೆ ಜಹಾ ಬಿಮಾರ್, ವಹಿ ಉಪಚಾರ್ ಎಂಬ ಘೋಷಣೆ ನೀಡಿದರು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಹಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ಸಂಕಷ್ಟವನ್ನು ಧೈರ್ಯದಿಂದ ಎದುರಿಸಬೇಕಾಗಿದೆ ಎಂದು ಭಾವುಕರಾದರು.
ಮಾಜಿ ಸ್ಪೀಕರ್ ಕೃಷ್ಣ ವಿಧಿವಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ