ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ಹಿನ್ನಲೆಯಲ್ಲಿ ಹೆಗಲಿಗೆ ಹೆಗಲುಕೊಟ್ಟು ನಾವೆಲ್ಲಾ ಒಗ್ಗಟ್ಟಿನಿಂದ ಕೊರೊನಾ ವಿರುದ್ಧ ಹೋರಾಡೋಣ. ವಾರದ 7 ದಿನ 24 ಗಂಟೆಯೂ ನಾನು ನಿಮಗೆ ಲಭ್ಯವಿರುತ್ತೇನೆ. ಕೊರೊನಾ ವಿರುದ್ಧ ಹೋರಾಟಕ್ಕೆ ನಿಮ್ಮ ಸಲಹೆಗಳನ್ನು ಮುಕ್ತವಾಗಿ ನನ್ನ ಜತೆ ಹಂಚಿಕೊಳ್ಳಬಹುದು ಎಂದು ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ನಿಡಿದ್ದಾರೆ.
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಈಗಾಗಲೇ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದ್ದು, ಏ.14ಕ್ಕೆ ಲಾಕ್ ಡೌನ್ ಅವಧಿ ಮುಕ್ತಾಯವಾಗಲಿದೆ. ಈ ಹಿನ್ನಲೆಯಲ್ಲಿ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಹೇಗಿದೆ?, ಸೋಂಕು ನಿಯಂತ್ರಣಕ್ಕೆ ರಾಜ್ಯಗಳು ಕೈಗೊಂಡ ಕ್ರಮಗಳು ಏನು? ಲಾಕ್ ಡೌನ್ ಅವಧಿ ವಿಸ್ತರಿಸಬೇಕೇ ಬೇಡವೇ ಎಂಬ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ 10ಕ್ಕೂ ಹೆಚ್ಚು ರಾಜ್ಯಗಳ ಸಿಎಂ ಗಳು ಲಾಕ್ ಡೌನ್ ಅವಧಿ ವಿಸ್ತರಿಸಿ ಎಂದು ಪ್ರಧಾನಿಗೆ ಮನವಿ ಮಾಡಿದ್ದಾರೆ. ಲಾಕ್ ಡೌನ್ ಇನ್ನಷ್ಟು ದಿನಗಳ ವರೆಗೆ ಮುಂದುವರೆಸಬೇಕು. ಇಲ್ಲವಾದಲ್ಲಿ ಕೊರೊನಾ ಸೋಂಕು ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ಅಭಿಪ್ರಾಯ ತಿಳಿಸಿದ್ದಾರೆ ಎನ್ನಲಾಗಿದೆ.
ಒಟ್ಟಾರೆ ಲಾಕ್ ಡೌನ್ ಅವಧಿ ಇನ್ನಷ್ಟುದಿನಗಳ ಕಾಲ ಆಂದಾರೆ ಏಪ್ರಿಲ್ 30ರವರೆಗೆ ಮುಂದುವರೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಇಂದು ಸಂಜೆ ಅಥವಾ ನಾಳೆ ಪ್ರಧಾನಿ ಮೋದಿ ಅಂತಿಮವಾಗಿ ಘೋಷಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ