Latest

ರಾಜಧಾನಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.

Home add -Advt

ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ತೇಜಸ್ವಿ ಸೂರ್ಯ ಮೊದಲಾದವರು ಉಪಸ್ಥಿತರಿದ್ದರು. ಹೆಚ್ ಎ ಎಲ್ ನಿಂದ ಪ್ರಧಾನಿ ಮೋದಿ ಅವರು ರಸ್ತೆ ಮಾರ್ಗವಾಗಿ ಮೇಖ್ರಿ ಸರ್ಕಲ್ ಮೂಲಕ ಶಾಸಕರ ಭವನಕ್ಕೆ ತೆರಳಲಿದ್ದು, ನಂತರ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆ ಅನಾವರಣ, ಒಂದೇ ಮಾತರಂ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಉದ್ಯೋಗ ಮೇಳ

https://pragati.taskdun.com/latest/udyoga-melashivamoggajob-offer/

Related Articles

Back to top button