ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣಗೊಂಡಿರುವ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರಗತಿಯ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ.
ದೇವನಹಳ್ಳಿ ಬಳಿಯ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 108 ಅಡಿ ಎತ್ತರದ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು.
ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಅಶ್ವತ್ಥ ನಾರಾಯಣ, ಡಾ.ಸುಧಾಕರ್,ಆರ್.ಅಶೋಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕೆಂಪೇಗೌಡರ ಕಂಚಿನ ಪ್ರತಿಮೆ 64 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಇಲ್ಲಿನ ಥೀಮ್ ಪಾರ್ಕ್ 20 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕೆಂಪೇಗೌಡರ ಪ್ರತಿಮೆ 218 ಟನ್ ತೂಕವನ್ನು ಹೊಂದಿದ್ದು, ಪ್ರತಿಮೆಗೆ ಅಳವಡಿಸಿರುವ ಖಡ್ಗ 4ವೇ ಟನ್ ತೂಕ ಹೊಂದಿದೆ . ಒಟ್ಟು 23 ಎಕರೆ ವಿಸ್ತೀರ್ಣದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣಗೊಂಡಿದ್ದು, ಕೆಂಪೇಗೌಡರ ಬೃಹತ್ ಪ್ರತಿಮೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದೆ.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು, ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನ ಟರ್ಮಿನಲ್ -2 ಉದ್ಘಾಟನೆ ನೆರವೇರಿಸಿದರು.
ಏಷ್ಯಾದ ಮೊದಲ ಗಾರ್ಡನ್ ಟರ್ಮಿನಲ್- 2 ಇದಾಗಿದ್ದು, 2.25 ಲಕ್ಷ ಚದರ ಮೀಟರ್ ವಿಸ್ತಿರ್ಣದಲ್ಲಿರುವ ಟರ್ಮಿನಲ್ ನಿರ್ಮಾಣಕ್ಕಾಗಿ 13,000 ಕೋಟಿ ವೆಚ್ಚ ಮಾಡಲಾಗಿದೆ. ವಾರ್ಷಿಕವಾಗಿ 2.5 ಕೋಟಿ ಪ್ರಯಾಣಿಕರ ನಿರ್ವಹಣೆಯ ಸಾಮರ್ಥ್ಯವನ್ನು ಹೊಂದಿದೆ.
ವಂದೇ ಭಾರತ್ ರೈಲು ಹಾಗೂ ಭಾರತ್ ಗೌರವ್ ಕಾಶಿ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
https://pragati.taskdun.com/politics/vande-bharat-trainbharat-gourav-kaashi-trainpm-modibangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ