ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಾಣೆ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಎರಡು ತಿಂಗಳಿಂದ ಚುನಾವಣಾ ಪ್ರಚಾರದಲ್ಲಿ ಸತತವಾಗಿ ತೊಡಗಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಧ್ಯಾನದ ಮೊರೆ ಹೋಗಲು ಸಿದ್ಧತೆ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ದಿನಗಳ ಕಾಲ ಕನ್ಯಾಕುಮಾರಿಯಲ್ಲಿ ಗುಹೆಯೊಂದರಲ್ಲಿ ಧ್ಯಾನಸ್ಥರಾಗಲಿದ್ದಾರೆ. ಭಾರತದ ದಕ್ಷಿಣ ತುತ್ತತುದಿಯ ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಪ್ರಧಾನಿ ಮೋದಿ ಇಂದಿನಿಂದ ಹಗಲು-ರಾತ್ರಿ ಮೂರು ದಿನ ಜೂನ್ 1ರ ಸಂಜೆಯವರೆಗೆ ಧ್ಯಾನದಲ್ಲಿ ತೊಡಗಿಕೊಳ್ಳಲಿದ್ದಾರೆ.
ಈ ಮೂಲಕ ಚುನಾವಣಾ ಫಲಿತಾಂಶಕ್ಕೂ ಮುನ್ನ ಪ್ರಧಾನಿ ಮೋದಿ ಧ್ಯಾನದಲ್ಲಿ ತೊಡಗಿಕೊಳ್ಳುವ ಮೂಲಕ ಮತ್ತೊಮೆ ಅಧಿಕಾರದ ಚುಕ್ಕಾಣಿ ಹಿಡಿಯಲು ವೇದಿಕೆ ಅಣಿಗೊಳಿಸುತ್ತಿದ್ದಾರೆ ಎನ್ನಲಾಗಿದೆ.
ಕನ್ಯಾಕುಮಾರಿ ವಿಶೇಷವಾದ ಶಕ್ತಿ ಹೊಂದಿರುವ ಕ್ಷೇತ್ರವಾಗಿದ್ದು, ತಾಯಿ ಕನ್ಯಾಕುಮಾರಿ ಆಶಿರ್ವಾದವಿರುವ ಈ ಪ್ರದೇಶ ಹಿಂದುಮಹಾಸಾಗರ, ಬಂಗಾಳ ಕೊಲ್ಲಿ ಹಾಗೂ ಅರೇಬಿಯನ್ ಸಮುದ್ರದ ಸಂಗಮವಾಗಿದೆ. ಧರ್ಮಗ್ರಂಥಗಳಲ್ಲಿ ಪಾರ್ವತಿ ದೇವಿಯು ಶಿವನ ಧ್ಯಾನ ಮಡಿದ ಸ್ಥಳವೆಂದು ಉಲ್ಲೇಖವಾಗಿದೆ. ಇಲ್ಲಿ ಧ್ಯಾನ ಮಾಡಿದರೆ ಹಲವು ಫಲಗಳು ಸಿಗುತ್ತವೆ. ಸ್ವಾಮಿ ವಿವೇಕಾನಂದರು ತಪಸ್ಸು ಮಾಡಿದ ಸ್ಥಳವಿದು. ಸ್ವಾಮಿ ವಿವೇಕಾನಂದರ ಜೀವನದ ಮೇಲೆ ಪ್ರಭಾವ ಬೀರಿದ ಈ ಸ್ಥಳವನ್ನೇ ಮೋದಿಯವರು ತಮ್ಮ ಜ್ಞಾನಾರ್ಜನೆಗಾಗಿ ಧ್ಯಾನಕ್ಕೆ ಆಯ್ಕೆ ಮಾಡಿಕೊಂಡಿರುವುದು ವಿಶೇಷ. ಇನ್ನು ಕಳೆದ ಬಾರಿ ಲೋಕಸಭಾ ಚುನಾವಣೆ ಬಳಿಕವೂ ನರೇಂದ್ರ ಮೋದಿಯವರು ಹಿಮಾಲದ ಗುಹೆಯೊಂದರಲ್ಲಿ ಧ್ಯಾನಕ್ಕೆ ಕುಳಿತಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ