ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2021ರ ಮೊದಲ ಮನ್ ಕೀ ಬಾತ್ ನಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದು, ಪ್ರಮುಖವಾಗಿ ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿದ್ದು ದು:ಖಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ವರ್ಷದ ಮೊದಲ ಮನ್ ಕೀ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತದಲ್ಲಿ ತಯಾರಾದ ಕೊರೊನ ಲಸಿಕೆ ಆತ್ಮನಿರ್ಭರ ಭಾರತದ ಸಂಕೇತ ಮಾತ್ರವಲ್ಲ ಅದು ಭಾರತದ ಆತ್ಮಗೌರವದ ಪ್ರತೀಕ. ಸಮಯ ಬಹಳ ವೇಗವಾಗಿ ಓಡುತ್ತೆ ಎಂಬುದನ್ನು ನೋಡಿದಾಗ ಮೊನ್ನೆಯಷ್ಟೇ ಹೊಸ ವರ್ಷಕ್ಕೆ ಕಾಲಿಟ್ಟಿದ್ದೆವು. ಈಗ ಹೊಸ ವರ್ಷದ ಒಂದು ತಿಂಗಳು ಮುಗಿದೇ ಹೋಯಿತು. ಜನವರಿಯಲ್ಲಿ ಹೊಸ ವರ್ಷ, ಸಂಕ್ರಾಂತಿ, ಗಣರಾಜ್ಯೋತ್ಸವನ್ನು ಸಂಭ್ರಮದಿಂದ ಆಚರಿಸಿದೆವು. ಆದರೆ ಗಣರಾಜ್ಯೋತ್ಸವ ದಿನ ಕೆಂಪುಕೋಟೆಯಲ್ಲಿ ನಡೆದ ಘಟನೆ ಬೇಸರ ತಂದಿದೆ ಎಂದರು.
ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿದ ಕ್ಷಣಕ್ಕೆ ಅಂದು ಇಡೀ ದೇಶದ ಜನತೆ ಸಾಕ್ಷಿಯಾಗಿದ್ದಾರೆ. ಇದು ಇಡೀ ದೇಶವೇ ತಲೆ ತಗ್ಗಿಸುವ ಕೃತ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ