Latest

ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ: ಪ್ರಧಾನಿ ನರೇಂದ್ರ ಮೋದಿ

ದಕ್ಷಿಣ ಕನ್ನಡ ರಾಜಕೀಯ ಇತಿಹಾಸದಲ್ಲಿಯೇ ಇಂದು ನಡೆದ ಪ್ರಧಾನಿ ಮೋದಿ ಅವರ ಮಂಗಳೂರು ಸಮಾವೇಶ ಹೊಸ ಇತಿಹಾಸ ಬರೆಯಿತು. ಮುಂಬರುವ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಿಟ್ಟಿನಲ್ಲಿ ಮಂಗಳೂರಿನಲ್ಲಿ ನಡೆದ ಸಮಾವೇಶ ಸಾಕ್ಷಿಯಾಗಿದ್ದು, ಸಾಗರೋಪಾದಿಯಲ್ಲಿ ಜನರು ಹರಿದುಬಂದಿದ್ದರು.

ಬಿಜೆಪಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಕರಾವಳಿಯಲ್ಲಿ ಪ್ರಧಾನಿ ಮೋದಿ ಭಾಷಣ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಕಿದ್ದ ಸಾಲು ಸಾಲು ಪ್ರಶ್ನೆಗಳಿಗೆ ಉತ್ತರ ನೀಡುವಂತಿತ್ತು. 3,800 ಕೋಟಿ ರೂಪಾಯಿಗಳ ಹಲವು ಯೋಜನೆಗಳಿಗೆ ಕಡಲ ನಗರಿಯಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಿದರು.

ಮೇಕ್ ಇನ್ ಇಂಡಿಯಾದ ವಿಸ್ತರಣೆ ಪ್ರಾಮುಖ್ಯತೆ ಪಡೆದಿದ್ದು, 8 ವರ್ಷಗಳಿಂದ ಮೂಲ ಸೌಕರ್ಯ ಕ್ಷೇತ್ರಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. ಸಾಗರ್ ಮಾಲಾ ಯೋಜನೆ ಕರ್ನಾಟಕದಲ್ಲಿ ಮಹತ್ವ ಪಡೆದುಕೊಂಡಿದೆ. ಆಯುಷ್ ಮಾನ್ ಭಾರತ್ ಯೋಜನೆಯಿಂದ ಬಡವರಿಗೆ ಅನುಕೂಲವಾಗಿದ್ದು, ಸುಮಾರು 4 ಕೋಟಿ ಬಡವರಿಗೆ ಉಚಿತ ಚಿಕಿತ್ಸೆ ದೊರೆತಿದೆ. ಮುದ್ರಾ ಯೋಜನೆಯಿಂದ ಸಣ್ಣ ಉದ್ದಿಮೆದಾರರಿಗೆ ಸಾಲ ಪ್ರಾಪ್ತಿಯಾಗುತ್ತಿದೆ. 20 ಲಕ್ಷಕ್ಕೂ ಹೆಚ್ಚು ಉದ್ಯಮಿಗಳಿಗೆ ಲೋನ್ ನೀಡಲಾಗಿದೆ ಎಂದು ತಿಳಿಸಿದರು.

Home add -Advt

ಉಡಾನ್ ಯೋಜನೆಯಿಂದ 1 ಕೋಟಿಗೂ ಹೆಚ್ಚು ಜನರು ವಿಮಾನದಲ್ಲಿ ಪ್ರಯಾಣಿಸುವಂತಾಗಿದೆ. ರಾಜ್ಯದ ಜನರ ಬೇಡಿಕೆಗೆ ಪೂರಕವಾಗಿ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಮೆಟ್ರೋ ಸಂಪರ್ಕದ ನಗರಗಳನ್ನು ನಾಲ್ಕು ಪಟ್ಟು ಹೆಚ್ಚಿಸಲಾಗಿದೆ. ಕ್ರೂಸ್ ಟೂರಿಸಂಗೆ ನವಮಂಗಳೂರು ಬಂದರು ಸೂಕ್ತವಾಗಿದೆ. ಕರಾವಳಿ ಕ್ಷೇತ್ರದ ಆಮೂಲಾಗ್ರ ಬದಲಾವಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕೊರೊನಾ ಕಾಲದಲ್ಲಿಯೂ ರಫ್ತು ಕ್ಷೇತ್ರದಲ್ಲಿ ಭಾರತ ದಾಖಲೆ ಬರೆದಿದೆ ಎಂದು ಹೇಳಿದರು.

 

ಪ್ರಗತಿವಾಹಿನಿ ಸುದ್ದಿ; ಮಂಗಳೂರು::- ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಅವರು ಶುಕ್ರವಾರ ಇಲ್ಲಿನ ಗೋಲ್ಡ್ಫಿಂಚ್ ಮೈದಾನದಲ್ಲಿ ೩೮೦೦ ಕೋಟಿ ರೂ. ಮೊತ್ತದ ೮ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು.
ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಸಾಗರ ಮಾಲಾ ಯೋಜನೆ, ರಾಷ್ಟಿçÃಯ ಹೆದ್ದಾರಿಗಳ ಅಭಿವೃದ್ಧಿ, ರೈಲ್ವೇ ಹಳಿಗಳ ವಿದ್ಯುದ್ದೀಕರಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಾಲ್ಕು ಪಟ್ಟು ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದಲ್ಲಿ ೩೦ಲಕ್ಷ ಮನೆಗಳಿಗೆ ನೇರವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಪ್ರಧಾನಮಂತ್ರಿ ಆಯುಷ್ಮಾನ್ ಯೋಜನೆಯಡಿ ೩೦ಲಕ್ಷ ಫಲಾನುಭಿಗಳಿಗೆ ೪ಸಾವಿರ ಕೋಟಿ ರೂ.ಮೊತ್ತದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯವಾಗಿದೆ ಎಂದು ಹೇಳಿದರು.
ದೇಶದ ಪ್ರಥಮ ಸ್ವದೇಶಿ ಏರ್‌ಕ್ರಾಫ್ಟ್ ವಾಹಕ ನೌಕೆಯನ್ನು ಇಂದು ಕೊಚ್ಚಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ದೇಶದ ಸೇನಾ ಸುರಕ್ಷತೆಗೆ ಹಾಗೂ ಆರ್ಥಿಕ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನವ ಮಂಗಳೂರು ಬಂದರಿನಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿಗೆ ೩೮೦೦ ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಇದರಿಂದ ದೇಶದ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗವಕಾಶ ಸೃಷ್ಟಿ ಸಾಧ್ಯವಾಗಲಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಸ್ಥಳೀಯ ಕೃಷಿಕರಿಗೆ ಹಾಗೂ ಮೀನುಗಾರರಿಗೆ ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸುಲಭವಾಗಲಿದೆ.  ಕಡಿಮೆ ವೆಚ್ಚದಲ್ಲಿ ಉತ್ಪನ್ನಗಳ ರಫ್ತು ಸಾಧ್ಯವಾಗಲಿದ್ದು, ನವ ಮಂಗಳೂರು ಬಂದರಿನ ಸಾಮರ್ಥ್ಯ ದ್ವಿಗುಣಳ್ಳಲಿದೆ ಎಂದು ಹೇಳಿದರು.
ದೇಶದ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ವೀರರಾಣಿ ಅಬ್ಬಕ್ಕ ಮತ್ತು  ರಾಣಿ ಚೆನ್ನಭೈರಾದೇವಿ ಅವರು ನಮಗೆ ಸ್ಪೂರ್ತಿಯಾಗಿದ್ದಾರೆ ಎಂದು ಪ್ರಧಾನಿ ಅವರು ಹೇಳಿದರು.
 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಡಬಲ್ ಇಂಜಿನ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಿದೆ. ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ೩೮೦೦ಕೋಟಿ ರೂ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ
ಪ್ರಧಾನಿ ಅವರು ಚಾಲನೆ ನೀಡಿದ್ದು, ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ವೇಗ ದೊರಕಲಿದೆ. ಬಂದರಿನ ವಹಿವಾಟು ಸಾಮರ್ಥ್ಯ ನಾಲ್ಕು ಪಟ್ಟು ಹೆಚ್ಚಾಗಲಿದ್ದು, ದೇಶದ ಆರ್ಥಿಕತೆಗೆ ಬಲ ತುಂಬಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಕರಾವಳಿ ಮಾತ್ರವಲ್ಲದೆ, ರಾಜ್ಯದ ಅಭಿವೃದ್ದಿ ಸಾಧ್ಯವಾಗಲಿದೆ. ನವಭಾರತದ ನಿರ್ಮಾಣದಲ್ಲಿ ನಮ್ಮ ಕರ್ನಾಟಕ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.
ರಾಜ್ಯದ ಸಿಆರ್‌ಜೆಡ್ ಮಾಸ್ಟರ್ ಪ್ಲಾನ್‌ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಕಳೆದ ೩೦ವರ್ಷಗಳ ಹೋರಾಟಕ್ಕೆ ಇದೀಗ ಫಲ ದೊರಕಿದೆ. ಇದರಿಂದ ಕರಾವಳಿಯ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಸಾಗರ ಮಾಲಾ ಯೋಜನೆಯಡಿ ಕಾರವಾರ ಬಂದರಿನಲ್ಲಿ ರೂ.೨೭೬ ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳು ಅನುಷ್ಟಾನಗೊಳ್ಳುತ್ತಿವೆ. ಇದೇ ರೀತಿ ಹೊನ್ನಾವರ ಮತ್ತು ಕುಮಟಾ ಬಂದರುಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ.  ಪಿಎಂ ಮತ್ಸö್ಯ ಸಂಪದ ಯೋಜನೆಯಡಿ ಆಳ ಮೀನುಗಾರಿಕೆಗೆ ಹೈಸ್ಪೀಡ್ ಬೋಟ್‌ಗಳನ್ನು ಖರೀದಿಸಲು ಕೇಂದ್ರ ಸರ್ಕಾರ ೪೦ಶೇಕಡಾ ಸಬ್ಸಿಡ ಒದಗಿಸಲಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಸರ್ಬಾನಂದ್ ಸೊನೊವಾಲ, ಶ್ರೀಪಾದ್ ನಾಯಕ್, ಶಾಂತನು ಠಾಕೂರ್, ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಸುನೀಲ್ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 

*ಸಿಆರ್ ಝೆಡ್ ಮಾಸ್ಟರ್ ಪ್ಲಾನ್ ಅನುಮೋದನೆ *

*ಕರಾವಳಿಯ ಆರ್ಥಿಕತೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಕರ್ನಾಟಕದ ಸಿಆರ್ ಝೆಡ್ ಮಾಸ್ಟರ್ ಪ್ಲಾನ್ನ್ನು ಕೇಂದ್ರ ಸರ್ಕಾರ ಅನುಮೋದನೆ  ನೀಡಿ ಆದೇಶ ಮಾಡಿದೆ. ಕರ್ನಾಟಕದ 30 ವರ್ಷದ ಹೋರಾಟಕ್ಕೆ ಜಯ ದೊರೆತಿದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು  ಇಂದು ಮಂಗಳೂರಿನ ಗೋಲ್ಡ್ಫಿಂಚ್ ಸಿಟಿ ಇಲ್ಲಿ ಆಯೋಜಿಸಿರುವ ರೂ. 3,800 ಕೋಟಿ ಮೊತ್ತದ ವಿವಿಧ ಯೋಜನೆಗಳ ಶಿಲಾನ್ಯಾಸ , ಭೂಮಿ ಪೂಜೆ ಕಾರ್ಯಕ್ರಮ ದಲ್ಲಿ ಗೌರವಾನಿತ್ವ ಪ್ರಧಾನಮಂತ್ರಿ   ನರೇಂದ್ರ ಮೋದಿ ಜೀ ಅವರೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಜ್ಯದ ಕರಾವಳಿ ಭಾಗದ ಆರ್ಥಿಕತೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ಈ ಯೋಜನೆ ಪೂರಕವಾಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.
ಕರ್ನಾಟಕ ಹಾಗೂ ಕೇಂದ್ರದಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದು, ಇಂದು ಸಾಗರ್ ಮಾಲಾ ಯೋಜನೆಯಲ್ಲಿ 18 ಯೋಜನೆಗಳನ್ನು ಪೂರ್ಣಗೊಳಿಸಿ, 14 ಯೋಜನೆಗಳನ್ನು ಇದೇ ವರ್ಷ  950 ಕೋಟಿ ರೂ.ಗಳ  ಯೋಜನೆಗೆ  ಜಲಸಾರಿಗೆ ಮತ್ತು ಬಂದರು ಇಲಾಖೆ ಅನುಮೋದನೆ ನೀಡಿ, ಮೋದಿಯವರ ನೇತೃತ್ವದಲ್ಲಿ ದೊಡ್ಡ ಪ್ರಮಾಣದಲ್ಲಿ   ಕರಾವಳಿ ಪ್ರದೇಶದ ಅಭಿವೃದ್ಧಿಗೆ ನರೇಂದ್ರ ಮೋದಿಯವರ ಆಶೀರ್ವಾದವೇ  ಕಾರಣ ಎಂದರು.
ರಾಜ್ಯದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳಿಗೆ ಅನುಮೋದನೆ ನೀಡಿದ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾರವಾರದ ಮಾಜಾಳಿ ಬಂದರು ಅಭಿವೃದ್ಧಿಯ 350 ಕೋಟಿ ರೂ. ಗಳ ಯೋಜನೆಗೆ ಅನುಮೋದನೆ ದೊರೆತಿದೆ. ಇದು ಡಬಲ್ ಇಂಜಿನ್ ಸರ್ಕಾರದ ಸಾಧನೆ.
ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮೀನುಗಾರರಿಗೆ ಅನುಕೂಲವಾಗಲು ಆಳಸಮುದ್ರ ಮೀನುಗಾರಿಕೆಗಾಗಿ 100 ಹೈಸ್ಪೀಡ್ ದೋಣಿಗಳನ್ನು ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಈ ಎಲ್ಲ ಯೋಜನೆಗಳಿಂದ ಕರಾವಳಿ ಭಾಗದ ಸಮಗ್ರ ಅಭಿವೃಧ್ಧಿ ಆಗುತ್ತದೆ ಎಂದರು.
ನವಕರ್ನಾಟಕದಿಂದ ನವಭಾರತದ ಅಭಿವೃದ್ಧಿ ಸಾಧ್ಯವಾಗಲಿದೆ :
ಸರ್ಕಾರದಿಂದ 2 ಬಂದರುಗಳ ಅಭಿವೃದ್ಧಿ  ಜೊತೆಗೆ ನವ ಮಂಗಳೂರು ಬಂದರು, ಕಾರವಾರ ಬಂದರುಗಳ ವಿಸ್ತರಣೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಧಾನಿಯವರ ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬಲು ಈ ಬಂದರುಗಳು ಸಹಕರಿಸಲಿದೆ ಎಂದು ನುಡಿದರು.
ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. 2 ಲಕ್ಷ ಮೀನುಗಾರರ ಮಕ್ಕಳಿಗೆ ಅನುಕೂಲವಾಗಲಿದೆ. 5 ಸಾವಿರ ಮನೆಗಳನ್ನು 64 ಕೋಟಿ ರೂ.ಗಳಲ್ಲಿ ನಿರ್ಮಿಸಲಾಗುತ್ತಿದೆ. ಕಾರವಾರದಲ್ಲಿ ಜಲಸಾರಿಗೆ ಮತ್ತು ಮೀನುಗಾರಿಕಾ ಸಂಸ್ಥೆಯನ್ನು ಸ್ಥಾಪಿಸಲಾಗುತ್ತಿದೆ.
ಡಬಲ್ ಇಂಜಿನ್ ಸರ್ಕಾರ ಕರ್ನಾಟಕವನ್ನಷ್ಟೇ ಅಲ್ಲ, ಭಾರತವನ್ನೂ ಮುನ್ನಡೆಸುತ್ತಿದೆ. ನವಕರ್ನಾಟಕದಿಂದ ನವಭಾರತದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ತಿಳಿಸಿದರು.
ಕರಾವಳಿ ಅಭಿವೃದ್ಧಿಯ ಮೂಲಕ ಸಮಗ್ರ  ಕರ್ನಾಟಕದ ಅಭಿವೃದ್ದಿ :
ಇಂದು ಕರಾವಳಿ ಅಭಿವೃದ್ಧಿಯಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ದಿನ. ಪ್ರಧಾನಮಂತ್ರಿಯವರ ದೂರದೃಷ್ಟಿಯಿಂದ ಇದು ಸಾಧ್ಯವಾಗಿದೆ. ವಿದೇಶ ವಿನಿಮಯ ಹೆಚ್ಚಾಗಬೇಕಾದರೆ ಆಮದು, ರಫ್ತು ಹೆಚ್ಚಾಗಲು ನಮ್ಮ ಬಂದರುಗಳ ನಿರ್ವಹಣಾ ಸಾಮರ್ಥ್ಯ ಹೆಚ್ಚಾಗಬೇಕು. ಇಷ್ಟು ವರ್ಷದ ಯೋಜನೆ ಇಂದು ಪ್ರತಿಫಲ ನೀಡುತ್ತಿದೆ.  ಈ ಹಿನ್ನೆಲೆಯಲ್ಲಿ 3800 ಕೋಟಿ ರೂ.ಗಳ ವೆಚ್ಚದಲ್ಲಿ ನವ ಮಂಗಳೂರು ಬಂದರಿನ ದೊಡ್ಡ ಅನುಕೂಲ ಕಲ್ಪಿಸಲಿದ್ದು, 8 ವರ್ಷದ ಯೋಜನೆ ಇಂದು ಫಲಪ್ರದವಾಗಿದೆ. ನವ ಮಂಗಳೂರು ಬಂದರು ಅಭಿವೃದ್ಧಿ ಆಗುತ್ತಿದೆ. ಇದರ ಸರಕು ನಿರ್ವಹಣೆ 4 ಪಟ್ಟು ಹೆಚ್ಚಾಗಿದೆ. ಎಲ್.ಪಿ.ಜಿ ಟರ್ಮಿನಲ್ ಸ್ಥಾಪನೆಯಾಗುತ್ತಿದೆ. ತೈಲ ಸಂಸ್ಕರಣಾಗಾರವೂ ನಿರ್ಮಾಣವಾಗುತ್ತಿದ್ದು, ಬರುವ ದಿನಗಳಲ್ಲಿ  ಈ ಕರಾವಳಿ ಪ್ರದೇಶದ ಅಭಿವೃದ್ಧಿಯ ಮೂಲಕ ಸಮಗ್ರ  ಕರ್ನಾಟಕದ ಅಭಿವೃದ್ಧಿಯಾಗುತ್ತದೆ ಎಂದರು.

ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ

https://pragati.taskdun.com/latest/pm-narendra-modimangalorevisit-2/

ಮುರುಘಾಶ್ರೀ ಪೊಲೀಸ್ ಕಸ್ಟಡಿಗೆ

https://pragati.taskdun.com/latest/muruga-shree-to-police-custody-for-3-days/

https://pragati.taskdun.com/latest/pm-narendra-modimangalorevisit/

Related Articles

Back to top button