
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ನರೇಂದ್ರ ಮೋದಿ ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದರು.
ಇದೇ ವೇಳೆ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ.ನಡ್ಡಾ,ಶಿವರಾಜ್ ಸಿಂಗ್ ಚೌವ್ಹಾಣ್, ನಿರ್ಮಲಾ ಸೀತಾರಾಮನ್, ಎಸ್.ಜೈಶಂಕರ್, ಮನೋಹರ್ ಲಾಲ್ ಖಟ್ಟರ್, ಹೆಚ್.ಡಿ.ಕುಮಾರಸ್ವಾಮಿ, ಪಿಯೂಷ್ ಗೋಯಲ್ ಸೇರಿದಂತೆ ಹಲವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಅದ್ದೂರಿ ಸಮಾರಂಭದಲ್ಲಿ ದೇಶ-ವಿದೇಶಗಳ ಗಣ್ಯಾತಿಗಣ್ಯರು, ಉದ್ಯಮಿಗಳು, ಮುಖೇಶ್ ಅಂಬಾನಿ, ಅದಾನಿ, ಬಾಲಿವುಡ್ ನಟ ಶಾರುಖ್ ಖಾನ್, ಅಕ್ಷಯ್ ಕುಮಾರ್, ರವಿನಾ ಟಂಡನ್, ವಿವಿಧ ರಾಜ್ಯಗಳ ರಾಜಕೀಯ ನಾಯಕರು, ಗಣ್ಯರು ಭಾಗವಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ