ಪ್ರಗತಿವಾಹಿನಿ ಸುದ್ದಿ; ನವದೆಹಲಿ: ತಾವು ಸೋಷಿಯಲ್ ಮೀಡಿಯಾದಿಂದ ದೂರ ಇರಲು ನಿರ್ಧರಿಸಿದ್ದ ಬಗ್ಗೆ ಕಾರಣವೇನು ಎಂಬುದನ್ನು ಸ್ವತ: ಪ್ರಾಧಾನಿ ಮೋದಿ ಸ್ಪಷ್ಟಪಡಿಸಿದ್ದು, ಕುತೂಹಲಗಳಿಗೆ ತೆರೆ ಎಳೆದಿದ್ದಾರೆ.
ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಪ್ರಧಾನಿ ಮೋದಿ ಏಕಾಏಕಿ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ದೂರ ಉಳಿಯಲು ಚಿಂತಿಸುತ್ತಿದ್ದೇನೆ. ಫೇಸ್‍ಬುಕ್, ಟ್ವಿಟ್ಟರ್, ಇನ್‍ಸ್ಟಾಗ್ರಾಂ ಹಾಗೂ ಯೂಟ್ಯೂಬ್‍ಗಳಿಂದ ದೂರ ಉಳಿಯಬೇಕೆಂದು ಚಿಂತಿಸಿದೆ. ಈ ಕುರಿತು ಮುಂದೆ ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದರು. ಪ್ರಧಾನಿ ಈ ಟ್ವೀಟ್ ದೇಶಾದ್ಯಂತ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಇದೀಗ ಈ ಕುರಿತು ಪ್ರಧಾನಿ ಮೋದಿಯೇ ಸ್ಪಷ್ಟನೆ ನೀಡಿ ಮಾತ್ತೊಂದು ಟ್ವೀಟ್ ಮಾಡಿದ್ದಾರೆ.
ತಮ್ಮ ಈ ನಿರ್ಧಾರಕ್ಕೆ ಮಹಿಳಾ ದಿನಾಚರಣೆ ಕಾರಣ ಎಂದಿದ್ದಾರೆ. ಹೌದು. ಮಾರ್ಚ್ 8 ಮಹಿಳೆಯರ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಮಹಿಳೆಯರಿಗೆ ಬಳಸಲು ಅವಕಾಶ ನೀಡುತ್ತಿದ್ದಾರೆ. ಈ ಬಾರಿಯ ಮಹಿಳೆಯರ ದಿನದಂದು ನಾನು ನನ್ನ ಎಲ್ಲಾ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ತಮ್ಮ ಜೀವನ ಮತ್ತು ಕೆಲಸದ ಮೂಲಕ ನಮಗೆ ಸ್ಫೂರ್ತಿಯಾದ ಮಹಿಳೆಯರಿಗೆ ಬಳಸಲು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಸ್ಪೂರ್ತಿದಾಯಕ ಜೀವನ ನಡೆಸಿ ಇತರರಿಗೆ ಮಾದರಿಯಾದ ಮಹಿಳೆಯರಿಗೆ ಗೌರವ ಸಲ್ಲಿಸಲು ಮೋದಿ ಈ ಪ್ಲಾನ್ ಮಾಡಿದ್ದಾರೆ. #SheInspiresUs ಹ್ಯಾಷ್‍ಟ್ಯಾಗ್ ಬಳಸಿ, ನಿಮ್ಮ ಜೀವನದಲ್ಲಿ ನಿಮಗೆ ಸ್ಪೂರ್ತಿಯಾದ ಮಹಿಳೆಯರ ಬಗ್ಗೆ ಪೋಸ್ಟ್ ಹಾಕಿ ಎಂದು ಮೋದಿ ಅವರು ಕರೆ ಕೊಟ್ಟಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ