National

*ಪ್ರಧಾನಿ ಮೋದಿ ಯುರೋಪ್ ಪ್ರವಾಸ ರದ್ದು*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನ ಉಗ್ರರ ವಿರುದ್ಧ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕೈಗೊಂಡಿರುವ ಬೆನ್ನಲ್ಲೇ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಯುರೋಪ್ ಪ್ರವಾಸ ರದ್ದಾಗಿದೆ ಎಂದು ತಿಳಿದುಬಂದಿದೆ. ಪ್ರಧಾನಿ ಮೋದಿ ಇಂದು ಯುರೋಪ್ ಪ್ರವಾಸ ಕೈಗೊಂಡಿದ್ದರು. ಕ್ರೋವೆಸಿಯಾ, ನೆದರ್ ಲ್ಯಾಂಡ್, ನಾರ್ವೆಗೆ ಭೇಟಿ ನೀಡುವವರಿದ್ದರು. ಆದರೆ ಉಗ್ರರ ವಿರುದ್ಧ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನಾ ಅಧಿಕಾರಿಗಳು ಹಾಗೂ ರಕ್ಷಣಾ ಇಲಾಖೆಯೊಂದಿಗೆ ಸಾಲು ಸಾಲು ಮಹತ್ವದ ಸಭೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಯುರೋಪ್ ಪ್ರವಾಸ ರದ್ದುಗೊಳಿಸಿದ್ದಾರೆ.

ನವದೆಹಲಿಯಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ ಶಾ ಹಾಗೂ ಸೇನಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಯುತ್ತಿದ್ದು, ಆಪರೇಶನ್ ಸಿಂಧೂರ ಕಾರ್ಯಾಚರಣೆ ಹಾಗೂ ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button